
ನಿನ್ನೆ ( ಮೇ 17 ) ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ 15 ರನ್ನುಗಳ ಜಯ ಕಂಡ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ತಂಡದ ಪ್ಲೇಆಫ್ ಕನಸಿಗೆ ತಣ್ಣೀರು ಎರಚಿದೆ.
ಹೌದು, ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಇನ್ನುಳಿದ ಎರಡು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯ ಬಹುದು ಎಂಬ ಯೋಜನೆಯಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸೋಲುಣಿಸುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕಸಿದುಕೊಂಡಿದೆ.
ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿ ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 214 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಕಠಿಣ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿತು.
ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಬಹುತೇಕ ಕಳೆದುಕೊಂಡಿದ್ದು, ಇನ್ನುಳಿದ ತಂಡಗಳು ಪ್ಲೇಆಫ್ ಪ್ರವೇಶಿಸಲು ಎಷ್ಟು ಪಂದ್ಯಗಳಲ್ಲಿ ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಬೇಕಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಬೇಕಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಆಫ್ ರೇಸಿನಿಂದ ಹೊರಬಿದ್ದಿದೆ.