For Quick Alerts
ALLOW NOTIFICATIONS  
For Daily Alerts
 

IPL 2023: ಅಂಕಪಟ್ಟಿಯ ಟಾಪ್ 4ರಲ್ಲಿ ಸ್ಥಾನ ಪಡೆದುಕೊಳ್ಳಲು ಯಾವ ತಂಡಗಳಿಗಿದೆ ಹೆಚ್ಚು ಅವಕಾಶ?

IPL 2023 playoff scenarios: All team playoff entry chances after the completion of rcb vs srh match

ನಿನ್ನೆ ( ಮೇ 18 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಮೂಲಕ ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65 ಪಂದ್ಯಗಳು ಮುಕ್ತಾಯಗೊಂಡಂತಾಗಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಕೊಂಡಿದೆ. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಿಗಿತ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವನ್ನು ಐದನೇ ಸ್ಥಾನಕ್ಕೆ ತಳ್ಳಿದೆ.

ಹೀಗೆ ಈ ಪಂದ್ಯದ ಬಳಿಕ ಅಂಕಪಟ್ಟಿಯಲ್ಲಿ ಹಲವು ಬದಲಾವಣೆಗಳಾಗಿದ್ದು, ವಿವಿಧ ತಂಡಗಳ ಪ್ಲೇಆಫ್ ಪ್ರವೇಶದ ಅವಕಾಶಗಳಲ್ಲಿಯೂ ಸಹ ವ್ಯತ್ಯಾಸಗಳಾಗಿವೆ. ಹಾಗಿದ್ದರೆ ಈ ಪಂದ್ಯದ ಮುಕ್ತಾಯದ ಬಳಿಕ ಯಾವ ತಂಡದ ಪ್ಲೇಆಫ್ ಪ್ರವೇಶದ ಅವಕಾಶ ಎಷ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ತನ್ನ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಗುಜರಾತ್ ಕಣಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ಸೋತರೂ ಸಹ ಟಾಪ್ 2 ಸ್ಥಾನ ಗುಜರಾತ್‌ಗೆ ಲಭಿಸುವುದು ಪಕ್ಕಾ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಒಂದುವೇಳೆ ಈ ಪಂದ್ಯದಲ್ಲಿ ಚೆನ್ನೈ ಸೋತು ಆರ್‌ಸಿಬಿ, ಮುಂಬೈ ಹಾಗೂ ಲಕ್ನೋ ತಮ್ಮ ಕೊನೆಯ ಪಂದ್ಯಗಳಲ್ಲಿ ಗೆದ್ದರೆ ಚೆನ್ನೈ ಟೂರ್ನಿಯಿಂದ ಹೊರಬೀಳಲಿದೆ.

3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಒಂದುವೇಳೆ ಈ ಪಂದ್ಯದಲ್ಲಿ ಲಕ್ನೋ ಸೋತು ಆರ್‌ಸಿಬಿ, ಮುಂಬೈ ಹಾಗೂ ಚೆನ್ನ ತಮ್ಮ ಕೊನೆಯ ಪಂದ್ಯಗಳಲ್ಲಿ ಗೆದ್ದರೆ ಲಕ್ನೋ ಟೂರ್ನಿಯಿಂದ ಹೊರಬೀಳಲಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ.

5. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.

7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.

9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
10. 13 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಫ್ ರೇಸ್‌ನಿಂದ ಹೊರಬಿದ್ದಿದೆ.

Story first published: Friday, May 19, 2023, 16:01 [IST]
Other articles published on May 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+