
ನಿನ್ನೆ ( ಮೇ 15 ) ನಡೆದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 62ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 34 ರನ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.
ಹೌದು, ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 18 ಅಂಕಗಳನ್ನು ಪಡೆದುಕೊಂಡ ಗುಜರಾತ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತು.
ಒಂದೆಡೆ ಗುಜರಾತ್ ಟೈಟನ್ಸ್ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟರೆ ಮತ್ತೊಂದೆಡೆ ಈ ಪಂದ್ಯದಲ್ಲಿ ಸೋತ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಿಂದ ಹೊರಬಿದ್ದಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ ಮತ್ತೊಂದು ತಂಡ ಪ್ಲೇಆಫ್ ರೇಸ್‌ನಿಂದ ಹಿಂದೆ ಸರಿದಿವೆ. ಹೀಗೆ ಗುಜರಾತ್ ಟೈಟನ್ಸ್ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದ್ದು, ಇದಾದ ಬಳಿಕ ಪ್ಲೇಆಫ್ ರೇಸ್‌ನಲ್ಲಿರುವ ಯಾವ ತಂಡಗಳು ಅರ್ಹತೆ ಗಿಟ್ಟಿಸಿಕೊಳ್ಳಲಿವೆ ಎಂಬ ಪ್ರಶ್ನೆ ಎದ್ದಿದೆ. ಹಾಗಿದ್ದರೆ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಳ್ಳಲು ಯಾವ ತಂಡಗಳು ಎಷ್ಟು ಪಂದ್ಯದಲ್ಲಿ ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಗೆಲ್ಲಬೇಕಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳನ್ನೂ ಗೆಲ್ಲಬೇಕಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
9. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಆಫ್ ರೇಸಿನಿಂದ ಹೊರಬಿದ್ದಿದೆ.