
ನಿನ್ನೆ ( ಮೇ 19 ) ಧರ್ಮಶಾಲಾದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಏರಿಕೆ ಕಂಡು ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಸ್ಯಾಮ್ ಕರನ್ ಹಾಗೂ ಜಿತೇಶ್ ಶರ್ಮಾ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ರನ್ ಕಲೆಹಾಕಿ, ತಮ್ಮ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು ರನ್‌ಗಳ ಗುರಿಯನ್ನು ನೀಡಿತ್ತು. ರಾಜಸ್ಥಾನ್ ರಾಯಲ್ಸ್ 19.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿದ್ದು 4 ವಿಕೆಟ್‌ಗಳ ಗೆಲುವನ್ನು ಕಂಡಿದೆ.
ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡರೆ, ಸೋತ ಪಂಜಾಬ್ ಕಿಂಗ್ಸ್ ಟೂರ್ನಿಯಿಂದಲೇ ಹೊರಬಿದ್ದಿದೆ. ಹೀಗೆ ಈ ಪಂದ್ಯದ ಬಳಿಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಯಾವ ತಂಡಕ್ಕೆ ಹೇಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ತನ್ನ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಗುಜರಾತ್ ಕಣಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ಸೋತರೂ ಸಹ ಟಾಪ್ 2 ಸ್ಥಾನ ಗುಜರಾತ್‌ಗೆ ಲಭಿಸುವುದು ಪಕ್ಕಾ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಒಂದುವೇಳೆ ಈ ಪಂದ್ಯದಲ್ಲಿ ಚೆನ್ನೈ ಸೋತು ಆರ್‌ಸಿಬಿ, ಮುಂಬೈ ಹಾಗೂ ಲಕ್ನೋ ತಮ್ಮ ಕೊನೆಯ ಪಂದ್ಯಗಳಲ್ಲಿ ಗೆದ್ದರೆ ಚೆನ್ನೈ ಟೂರ್ನಿಯಿಂದ ಹೊರಬೀಳಲಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಒಂದುವೇಳೆ ಈ ಪಂದ್ಯದಲ್ಲಿ ಲಕ್ನೋ ಸೋತು ಆರ್‌ಸಿಬಿ, ಮುಂಬೈ ಹಾಗೂ ಚೆನ್ನ ತಮ್ಮ ಕೊನೆಯ ಪಂದ್ಯಗಳಲ್ಲಿ ಗೆದ್ದರೆ ಲಕ್ನೋ ಟೂರ್ನಿಯಿಂದ ಹೊರಬೀಳಲಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
5. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು ರಾಜಸ್ಥಾನ್ ರಾಯಲ್ಸ್ ತಂಡಕ್ಕಿಂತ ಕಡಿಮೆ ನೆಟ್ ರನ್ ರೇಟ್ ಪಡೆದರೆ, ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಪ್ರವೇಶಿಸಲಿದೆ.
6. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
10. 13 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಫ್ ರೇಸ್‌ನಿಂದ ಹೊರಬಿದ್ದಿದೆ.