
ನಿನ್ನೆ ( ಮೇ 14 ) ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡಬಲ್ ಹೆಡರ್ ಪಂದ್ಯಗಳು ಆಯೋಜನೆಗೊಂಡಿದ್ದವು.
ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬರೋಬ್ಬರಿ 112 ರನ್ನುಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರುವ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿತು.
ಬಳಿಕ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ ಪ್ಲೇಆಫ್ ಪ್ರವೇಶಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಸೋತ ಕಾರಣ ಇದೀಗ ಮತ್ತೊಂದು ಪಂದ್ಯದ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ.
ಹೀಗೆ ನಿನ್ನೆಯ ಪಂದ್ಯಗಳ ಫಲಿತಾಂಶದಿಂದ ಪ್ಲೇಆಫ್ ಪ್ರವೇಶಿಸಬಹುದಾದ ಸಾಧ್ಯತೆಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಸದ್ಯ ಪ್ಲೇಆಫ್ ಅರ್ಹತೆ ಗಿಟ್ಟಿಸಿಕೊಳ್ಳಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ.
1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಒಂದು ಪಂದ್ಯ ಗೆಲ್ಲಬೇಕಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಗೆಲ್ಲಬೇಕಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳನ್ನೂ ಗೆಲ್ಲಬೇಕಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
9. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಉಳಿದ 3 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಆಫ್ ರೇಸಿನಿಂದ ಹೊರಬಿದ್ದಿದೆ.