IPL 2023: ಟಾಪ್-2 ಸ್ಥಾನಕ್ಕೇರಲಿದೆಯಾ RCB: ಈ 4 ಪಂದ್ಯಗಳು ನಿರ್ಧರಿಲಿದೆ ಆರ್‌ಸಿಬಿ ಭವಿಷ್ಯ!
ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಟೂರ್ನಿಯ ಅಂತಿಮ ಹಂತದಲ್ಲಿ ಆರ್‌ಸಿಬಿ ತಂಡ ಸದ್ಯ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಆರ್‌ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಖಚಿತವಾಗಿಲ್ಲ. ಹೀಗಾಗಿ ಅಂತಿಮ ಹಂತದ ಪ್ರತಿಯೊಂದು ಪಂದ್ಯಗಳ ಫಲಿತಾಂಶ ಕೂಡ ಪ್ಲೇಆಫ್ ರೇಸ್‌ನಲ್ಲಿರುವ ಎಲ್ಲಾ ತಮಡಗಳಿಗೂ ನಿರ್ಣಾಯಕವಾಗಿದೆ. ಹೀಗಾಗಿ ಪಂದ್ಯಗಳ ಕುತೂಹಲ ಹೆಚ್ಚಾಗಿದೆ.
ಇನ್ನು ಆರ್‌ಸಿಬಿ ತಮಡ ಈ ಬಾರಿಯ ಐಪಿಎಲ್‌ನ ಲೀಗ್ ಹಂತದಲ್ಲಿ ಅಗ್ರ 2ನೇ ಸ್ಥಾನಕ್ಕೇರುವ ಅವಕಾಶವಿದೆ. ಆದರೆ ಇದು ಸಾಧ್ಯವಾಗಬೇಕಾದರೆ ಆರ್‌ಸಿಬಿ ತಂಡ ಉಳಿದ ಒಂದು ಪಂದ್ಯದಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಉಳಿದ ಪಂದ್ಯಗಳ ಫಲಿತಾಂಶ ಅಂದುಕೊಂಡ ರೀತಿಯಲ್ಲಿ ಬರಬೇಕಿದೆ. ಹಾಗಿದ್ದರೆ ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ಟಾಪ್ 2 ತಂಡವಾಗಿ ಪ್ಲೇಆಫ್‌ಗೆ ಪ್ರವೇಶ ಪಡೆಯಲಿದೆ.

ಟಾಪ್ 2 ಯಾಕೆ ಮುಖ್ಯ?
ಇನ್ನು ಐಪಿಎಲ್‌ನ ಲೀಗ್ ಹಂತದಲ್ಲಿ ಟಾಪ್ 2 ಆಗಿ ಪ್ಲೇಆಫ್‌ಗೆ ಪ್ರವೇಶಿಸುವುದು ಬಹಳ ಮುಖ್ಯವಾಗಲಿದೆ. ಈ ಲೀಗ್‌ನ ಪ್ಲೇಆಫ್ ಪಂದ್ಯಗಳ ಮಾದರಿಯೇ ಅದಕ್ಕೆ ಕಾರಣ. ಲೀಗ್‌ನಲ್ಲಿ ಅಗ್ರ ಎರಡು ಸ್ಥಾನಗಳು ಪಡೆದ ತಂಡಗಳು ಪ್ಲೇಆಪ್‌ನಲ್ಲಿ ಕ್ವಾಲಿಫೈಯರ್ ಪಂದ್ಯವನ್ನು ಆಡುವ ಅವಕಾಶ ಗಿಟ್ಟಿಸಿಕೊಳ್ಳಲಿದೆ. ಅಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದ್ದು ಟ್ರೋಫಿ ಮೇಲೆ ಕಣ್ಣಿಡುವ ಅವಕಾಶವಿದೆ. ಅಲ್ಲದೆ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದ್ದು ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದುಕೊಂಡ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ ಆಡುವ ಅವಕಾಶ ದೊರೆಯಲಿದೆ. ಇಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶಿಸಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡಿಸಿ ಗೆಲ್ಲಬೇಕು
ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎದುರಿಸಲಿದೆ. ಈ ಪಂದ್ಯದಲ್ಲಿ ಎಂಎಸ್ ಧೋನಿ ಪಡೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಬೇಕು. ಅದು ಸಾಧ್ಯವಾದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ ಹಂತದಲ್ಲಿ 15 ಅಂಕಗಳಿಗೆ ಸೀಮಿತವಾಗಲಿದೆ. ಇದು ಆರ್‌ಸಿಬಿ ತಂಡಕ್ಕೆ ಮೊದಲ ಸ್ಥಾನಕ್ಕೇರುವ ಅವಕಾಶವನ್ನು ತೆರೆದಿಡಲಿದೆ.
LSG ವಿರುದ್ಧ KKRಗೆ ಗೆಲುವು
ಇನ್ನು ಶನಿವಾರ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಗೆಲುವು ಸಾಧಿಸಬೇಕಿದೆ. ಆಗ ಸದ್ಯ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಂಕ ಕೂಡ 15ಕ್ಕೆ ಸೀಮಿತವಾಗಲಿದೆ.
SRH vs MI ಪಂದ್ಯದಲಿ ಹೀಗಾಗಬೇಕು!
ಇನ್ನು ಭಾನುವಾರ ನಡೆಯಲಿರುವ ಡಬಲ್ ಹೆಡ್ಡರ್ ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದಾರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಡಲಿದೆ. ಈ ಪಂದ್ಯದಲ್ಲಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಬೇಕು. ಒಂದು ವೇಳೆ ಮುಂಬೈ ಇಂಡಿಯನ್ಸ ತಂಡ ಗೆದ್ದರೂ ಅದರ ಅಂತರ ಬಹಳ ಅಲ್ಪವಾಗಿದ್ದರೆ ಆರ್‌ಸಿಬಿಗೆ ಅವಕಾಶವಿದೆ.
ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಗೆಲ್ಲಲೇಬೇಕು
ಇನ್ನು ಆರ್‌ಸಿಬಿ ತಂಡ ಪ್ಲೇಆಫ್‌ಗೇರಲು ಹಾಗೂ ಟಾಪ್ 2 ಸ್ಥಾನ ಪಡೆಯಲು ಈ ಎಲ್ಲಾ ಲೆಕ್ಕಾಚಾರಗಳ ಜೊತೆಗೆ ಆರ್‌ಸಿಬಿ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಭಾನುವಾರ ರಾತ್ರಿ ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕು. ಆಗ ಆರ್‌ಸಿಬಿ ತಂಡ 16 ಅಂಕಗಳನ್ನು ಖಾತೆಯಲ್ಲಿ ಹೊಂದಿರಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದರೆ ಮಾತ್ರವೇ ಆರ್‌ಸಿಬಿ ತಂಡದ ಟಾಪ್ 2 ಕನಸು ನನಸಾಗಲು ಸಾಧ್ಯ. ಇಲ್ಲವಾದರೆ ಪ್ಲೇಆಫ್‌ಗೆ ಪ್ರವೇಶ ಪಡೆಯದೆ ಹೊರಬಿದ್ದರೂ ಅಚ್ಚರಿಯಿಲ್ಲ. ಯಾಕೆಂದರೆ ಉಳಿದ ತಂಡಗಳ ಪೈಪೋಟಿ ಅಷ್ಟರ ಮಟ್ಟಿಗಿದೆ!
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications