For Quick Alerts
ALLOW NOTIFICATIONS  
For Daily Alerts
 

IPL 2023: CSK vs SRH ಪಂದ್ಯದ ಬಳಿಕ ಅಂಕಪಟ್ಟಿ ಹೇಗಿದೆ? ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2023: Points table, orange cap and purple cap updated list after CSK vs SRH match

ನಿನ್ನೆ ( ಏಪ್ರಿಲ್ 21 ) ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಣಕ್ಕಿಳಿದಿದ್ದವು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್‌ಗಳ ಗೆಲುವನ್ನು ಕಂಡು ಟೂರ್ನಿಯಲ್ಲಿ ತನ್ನ ನಾಲ್ಕನೇ ಗೆಲುವನ್ನು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿತು. 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 134 ರನ್ ಕಲೆಹಾಕಿದ ಸನ್ ರೈಸರ್ಸ್ ಹೈದರಾಬಾದ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 135 ರನ್‌ಗಳ ಸಾಧಾರಣ ಗುರಿಯನ್ನು ನೀಡಿತ್ತು. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಡಿವಾನ್ ಕಾನ್ವೆ ಅಬ್ಬರದ ಬ್ಯಾಟಿಂಗ್ ನೆರವಿನಿಂದ 18.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್‌ಗಳು ಯಾರ ಬಳಿ ಇವೆ ಮತ್ತು ಅಂಕಪಟ್ಟಿಯಲ್ಲಿ ಯಾವ ತಂಡಗಳು ಎಷ್ಟು ಅಂಕಗಳನ್ನು ಪಡೆದುಕೊಂಡು ಯಾವ ಸ್ಥಾನದಲ್ಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಆರೆಂಜ್ ಕ್ಯಾಪ್‌ ಪಟ್ಟಿ:
ಟೂರ್ನಿಯಲ್ಲಿ ಇಲ್ಲಿಯವರೆಗೂ ಅತಿಹೆಚ್ಚು ರನ್ ಬಾರಿಸಿರುವ ಟಾಪ್ 5 ಆಟಗಾರರ ಪಟ್ಟಿ ಇಲ್ಲಿದೆ

1. ಫಾಫ್ ಡು ಪ್ಲೆಸಿಸ್ - 343 ರನ್‌ಗಳು
2. ಡೇವಿಡ್ ವಾರ್ನರ್ - 285 ರನ್‌ಗಳು
3. ವಿರಾಟ್ ಕೊಹ್ಲಿ - 279 ರನ್‌ಗಳು
4. ಡಿವಾನ್ ಕಾನ್ವೆ - 258 ರನ್‌ಗಳು
5. ಜೋಸ್ ಬಟ್ಲರ್ - 244 ರನ್‌ಗಳು

faf

ಪರ್ಪಲ್ ಕ್ಯಾಪ್ ಪಟ್ಟಿ:
ಟೂರ್ನಿಯಲ್ಲಿ ಇಲ್ಲಿಯವರೆಗೂ ಅತಿಹೆಚ್ಚು ವಿಕೆಟ್ ಪಡೆದಿರುವ ಟಾಪ್ 5 ಆಟಗಾರರ ಪಟ್ಟಿ ಇಲ್ಲಿದೆ

1. ಮೊಹಮ್ಮದ್ ಸಿರಾಜ್ - 12 ವಿಕೆಟ್‌ಗಳು
2. ಮಾರ್ಕ್ ವುಡ್ - 11 ವಿಕೆಟ್‌ಗಳು
3. ಯುಜ್ವೇಂದ್ರ ಚಹಲ್ - 11 ವಿಕೆಟ್‌ಗಳು
4. ರಶೀದ್ ಖಾನ್ - 11 ವಿಕೆಟ್‌ಗಳು
5. ಮೊಹಮ್ಮದ್ ಶಮಿ - 10 ವಿಕೆಟ್‌ಗಳು

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೀಗಿದೆ:

1. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

4. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. 6 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 6 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 6 ಪಂದ್ಯಗಳನ್ನಾಡಿ ಕೇವಲ 1 ಪಂದ್ಯದಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Saturday, April 22, 2023, 8:51 [IST]
Other articles published on Apr 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+