For Quick Alerts
ALLOW NOTIFICATIONS  
For Daily Alerts
 

IPL 2023: KKR vs RCB ಪಂದ್ಯದ ಬಳಿಕ ಅಂಕಪಟ್ಟಿ ಹೇಗಿದೆ? ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಪಟ್ಟಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ 9 ಪಂದ್ಯಗಳು ಅಂತ್ಯವಾಗಿದ್ದು ಟೂರ್ನಿ ರೋಚಕತೆ ಹೆಚ್ಚಾಗುತ್ತಿದೆ. ಏಪ್ರಿಲ್ 6 ಗುರುವಾರದಂದು ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ತಂಡ ಎದುರಿಸಿದ್ದು ಕೆಕೆಆರ್ ಮೊದಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಹೀನಾಯ ಸೋಲು ಅನುಬವಿಸಿದ್ದು ಭಾರೀ ಹಿನ್ನಡೆ ಕಂಡಿತು. ಈ ಫಲಿತಾಂಶ ಅಂಕಪಟ್ಟಿಯಲ್ಲಿಯೂ ಭಾರೀ ಏರಿಳಿತಕ್ಕೆ ಕಾರಣವಾಗಿದೆ.

3ನೇ ಸ್ಥಾನಕ್ಕೇರಿದ ಕೆಕೆಆರ್: ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಗೆಲುವು ಸಾಧಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆರ್‌ಸಿಬಿ ತಂಡವನ್ನು ಭಾರೀ ಅಂತರದಿಂದ ಮಣಿಸಿದೆ. ಇದರ ಪರಿಣಾಮವಾಗಿ ನೆಟ್‌ ರನ್‌ರೇಟ್‌ನಲ್ಲಿ ಭಾರೀ ಏರಿಕೆ ಕಂಡಿದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್ 7ನೇ ಸ್ಥಾನದಲ್ಲಿತ್ತು. ಇತ್ತ ಆರ್‌ಸಿಬಿ ಪರಿಸ್ಥಿತಿ ಭಿನ್ನವಾಗಿದ್ದು ಈ ಪಂದ್ಯಕ್ಕೂ ಮುನ್ನ 3ನೇ ಸ್ಥಾನದಲ್ಲಿದ್ದ ಆರ್‌ಸಿಬಿ 7ನೇ ಸ್ಥಾನಕ್ಕೆ ಕುಸಿದಿದೆ.

IPL 2023 Points Table standings after KKR vs RCB match, Orange Cap and Purple cap list

ಇನ್ನು ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದು ಪಂಜಾಬ್ ಕಿಂಗ್ಸ್ ತಂಡ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿಯೂ ಈ ಎರಡು ತಂಡಗಳು ಕೂಡ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಇದೆ. ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದ್ದರೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಐದನೇ ಸ್ಥಾನದಲ್ಲಿದೆ.

ಯಾರಲ್ಲಿದೆ ಆರೆಂಜ್ ಕ್ಯಾಪ್?: ಇನ್ನು ಈ ಬಾರಿಯ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿ ಅಬ್ಬರಿಸಿರುವ ಋತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಎರಡು ಪಂದ್ಯಗಳಲ್ಲಿ ಅವರು 149 ರನ್‌ಗಳಿಸಿದ್ದಾರೆ. ಇನ್ನು ಕೇಲ್ ಮೇಯರ್ಸ್ ಕೂಡ ಮೊದಲ ಎರಡು ಪಂದ್ಯಗಳಲ್ಲಿಯೂ ಅರ್ಧ ಶತ ಗಳಿಸಿದ್ದು 126 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು ಶಿಖರ್ ಧವನ್ ಕೂಡ ಇಷ್ಟೇ ರನ್‌ಗಳೊಂದಿಗೆ ಈ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಪರ್ಪಲ್‌ಕ್ಯಾಪ್ ಪಟ್ಟಿಯಲ್ಲಿ ಯಾರಿದ್ದಾರೆ ಮುಂದೆ?: ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿರುವುದು ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್. ಆಡಿರುವ ಎರಡು ಪಂದ್ಯಗಳಲ್ಲಿ ಮಾರ್ಜ್ ವುಡ್ 8 ವಿಕೆಟ್ ಕಬಳಿಸಿ ಅಬ್ಬರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಐದು ವಿಕೆಟ್ ಪಡೆದುಕೊಂಡಿದ್ದವುಡ್ ಬಳಿಕ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್ ಕಿತ್ತು ಮಿಂಚಿದ್ದರು. ನಂತರದ ಸ್ಥಾನದಲ್ಲಿ ವರುಣ್ ಚಕ್ರವರ್ತಿ, ರಶೀದ್ ಖಾನ್, ರವಿ ಬಿಷ್ಣೋಯ್, ನಥನ್ ಎಲ್ಲೀಸ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ ಮತ್ತು ಅರ್ಶದೀಪ್ ಸಿಂಗ್ ಇದ್ದು ಈ ಎಲ್ಲಾ ಬೌಲರ್‌ಗಳು ತಲಾ ಐದು ವಿಕೆಟ್ ಪಡೆದುಕೊಂಡಿದ್ದಾರೆ.

ಇಂದಿನ ಪಂದ್ಯ: ಇನ್ನು ಐಪಿಎಲ್‌ನಲ್ಲಿ ಇಂದು 10ನೇ ಪಂದ್ಯ ನಡೆಯಲಿದ್ದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಒಂದು ಸೋಲು ಅನುಭವಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನದಲ್ಲಿದ್ದರೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಗೆಲುವಿನ ಹುಡುಕಾಟದಲ್ಲಿದೆ.

Story first published: Friday, April 7, 2023, 12:43 [IST]
Other articles published on Apr 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+