For Quick Alerts
ALLOW NOTIFICATIONS  
For Daily Alerts
 

DC vs PBKS: ಪ್ರಭ್‌ಸಿಮ್ರಾನ್ ಸಿಂಗ್ ಶತಕ; ಡೆಲ್ಲಿಗೆ 168 ರನ್‌ಗಳ ಗುರಿ ನೀಡಿದ ಪಂಜಾಬ್

IPL 2023: Prabhsimran Singhs century helps Punjab Kings to sets target of 168 runs to Delhi Capitals

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 58 ಹಾಗೂ 59ನೇ ಪಂದ್ಯಗಳು ಇಂದು ( ಮೇ 13 ) ನಡೆಯುತ್ತಿವೆ. ಮಧ್ಯಾಹ್ನ ನಡೆದ 58ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ಸಂಜೆ ಆರಂಭಗೊಂಡಿರುವ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಫೀಲ್ಡಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ತಂಡ ಪಂಜಾಬ್ ಕಿಂಗ್ಸ್ ಅನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 168 ರನ್‌ಗಳ ಗುರಿಯನ್ನು ನೀಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಪ್ರಭ್‌ಸಿಮ್ರಾನ್ ಸಿಂಗ್ ಹಾಗೂ ನಾಯಕ ಶಿಖರ್ ಧವನ್ ಕಣಕ್ಕಿಳಿದರು. ಧವನ್ 7 ರನ್ ಗಳಿಸಿ ಔಟ್ ಆದರೆ ಪ್ರಭ್‌ಸಿಮ್ರಾನ್ ಸಿಂಗ್ 65 ಎಸೆತಗಳಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 103 ರನ್ ಗಳಿಸಿದರು. ಹೀಗೆ ಪ್ರಭ್‌ಸಿಮ್ರಾನ್ ಸಿಂಗ್ ಅಬ್ಬರದ ಶತಕ ಬಾರಿಸಿದ್ದು ಬಿಟ್ಟರೆ ಪಂಜಾಬ್ ಕಿಂಗ್ಸ್ ತಂಡದ ಉಳಿದ ಯಾವ ಆಟಗಾರ ಸಹ 20 ರನ್‌ಗಿಂತ ಹೆಚ್ಚು ದಾಖಲಿಸಲಿಲ್ಲ.

ಲಿಯಾಮ್ ಲಿವಿಂಗ್‌ಸ್ಟನ್ 4, ಜಿತೇಶ್ ಶರ್ಮಾ 5, ಸ್ಯಾಮ್ ಕರನ್ 20, ಹರ್‌ಪ್ರೀತ್ ಬ್ರಾರ್ 2, ಶಾರುಖ್ ಖಾನ್ 2, ಸಿಖಂದರ್ ರಾಜಾ 11 ಹಾಗೂ ರಿಷಿ ಧವನ್ ಯಾವುದೆ ಎಸೆತ ಎದುರಿಸದೇ ಅಜೇಯರಾಗಿ ಉಳಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಇಶಾಂತ್ ಶರ್ಮಾ 2 ವಿಕೆಟ್, ಅಕ್ಷರ್ ಪಟೇಲ್, ಪ್ರವೀಣ್ ದುಬೆ, ಕುಲ್‌ದೀಪ್ ಯಾದವ್ ಹಾಗೂ ಮುಖೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಅಮನ್ ಹಕೀಮ್ ಖಾನ್, ಅಕ್ಸರ್ ಪಟೇಲ್, ಪ್ರವೀಣ್ ದುಬೆ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಸಿಕಂದರ್ ರಜಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

Story first published: Saturday, May 13, 2023, 21:19 [IST]
Other articles published on May 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+