IPL 2023: ನಾಥನ್ ಎಲ್ಲಿಸ್, ಅರ್ಶ್‌ದೀಪ್ ಮಾರಕ ಬೌಲಿಂಗ್; ರಾಜಸ್ಥಾನ ವಿರುದ್ಧ ಪಂಜಾಬ್‌ಗೆ ರೋಚಕ ಗೆಲುವು
ಬುಧವಾರ, ಏಪ್ರಿಲ್ 5ರಂದು ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 8ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು ದಾಖಲಿಸಿದೆ.
ಪಂಜಾಬ್ ಕಿಂಗ್ಸ್ ತಂಡ ನೀಡಿದ್ದ 198 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡ ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 192 ರನ್‌ಗಳನ್ನು ಗಳಿಸಿ ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ರಾಜಸ್ಥಾನ ರಾಯಲ್ಸ್ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ರವಿಚಂದ್ರನ್ ಅಶ್ವಿನ್ ದೊಡ್ಡ ಜೊತೆಯಾಟ ನೀಡುವಲ್ಲಿ ವಿಫಲರಾದರು. ರವಿಚಂದ್ರನ್ ಅಶ್ವಿನ್ ಸೊನ್ನೆಗೆ ಔಟಾದರೆ, ಯಶಸ್ವಿ ಜೈಸ್ವಾಲ್ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೋಸ್ ಬಟ್ಲರ್ 11 ಎಸೆತಗಳಲ್ಲಿ 19 ರನ್ ಗಳಿಸಿದರು.
ಇನ್ನು ನಾಯಕ ಸಂಜು ಸ್ಯಾಮ್ಸನ್ ಮಾತ್ರ 25 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ಸಮೇತ 42 ರನ್ ಬಾರಿಸಿ ತಂಡದ ಪರ ಹೆಚ್ಚಿನ ಮೊತ್ತ ಗಳಿಸಿದರು. ದೇವದತ್ ಪಡಿಕ್ಕಲ್ 21 ರನ್, ರಿಯಾನ್ ಪರಾಗ್ 20 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದರು.
ಈ ವೇಳೆ ಜಯದ ಆಸೆ ಕೈಬಿಟ್ಟಿದ್ದ ರಾಜಸ್ಥಾನ ರಾಯಲ್ಸ್ ತಂಡವನ್ನು ಶಿಮ್ರಾನ್ ಹೆಟ್ಮೆಯರ್ ಮತ್ತು ಧ್ರುವ ಜುರೆಲ್ ಜೋಡಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗೆಲುವಿನ ಸಮೀಪ ತಂದು ನಿಲ್ಲಿಸಿದರು. ಆದರೆ ಕೊನೆಯ ಓವರ್‌ನಲ್ಲಿ 16 ರನ್‌ಗಳು ಬೇಕಿದ್ದಾಗ ಶಿಮ್ರಾನ್ ಹೆಟ್ಮೆಯರ್ ಔಟಾಗುವುದರೊಂದಿಗೆ ನಿರಾಸೆ ಅನುಭವಿಸಿತು.

ಶಿಮ್ರಾನ್ ಹೆಟ್ಮೆಯರ್ 18 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 36 ರನ್ ಬಾರಿಸಿದರೆ, ಧ್ರುವ ಜುರೆಲ್ 15 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ಗಳಿಂದ 32 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ನಾಥನ್ ಎಲ್ಲಿಸ್ 4 ಓವರ್‌ಗಳಲ್ಲಿ 30 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದು ಮಿಂಚಿದರು. ಇನ್ನು ಅರ್ಶ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ 47 ರನ್ ನೀಡಿ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು.

ಪಂಜಾಬ್ ಕಿಂಗ್ಸ್ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ಶಿಖರ್ ಧವನ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 9.1 ಓವರ್‌ಗಳಲ್ಲಿ 90 ರನ್‌ಗಳ ಜೊತೆಯಾಟವಾಡಿದರು. ಪ್ರಭ್‌ಸಿಮ್ರಾನ್ ಸಿಂಗ್ 34 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 60 ರನ್ ಬಾರಿಸಿ ಔಟಾದರು.
ನಂತರ ಬಂದ ಭಾನುಕ ರಾಜಪಕ್ಸ 1 ರನ್ ಗಳಿಸಿ ಆಡುತ್ತಿದ್ದಾಗ ಗಾಯಗೊಂಡು ನಿವೃತ್ತಿ ಪಡೆದರು. ಬಳಿಕ ಕ್ರೀಸ್‌ಗಿಳಿದ ಜಿತೇಶ್ ಶರ್ಮಾ 16 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 27 ರನ್ ಗಳಿಸಿದರು. ಶಾರೂಖ್ ಖಾನ್ 10 ಎಸೆತಗಳಲ್ಲಿ 11 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.
ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 86 ರನ್ ಬಾರಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸುವಲ್ಲಿ ನೆರವಾದರು.
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಜೇಸನ್ ಹೋಲ್ಡರ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 4 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು ಮತ್ತು ಯುಜ್ವೇಂದ್ರ ಚಾಹಲ್ 4 ಓವರ್‌ಗಳಲ್ಲಿ 29 ರನ್ ನೀಡಿ 50 ರನ್ ನೀಡಿ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications