PBKS vs RR: ಸ್ಯಾಮ್ ಕರನ್, ಜಿತೇಶ್ ಶರ್ಮಾ, ಶಾರುಖ್ ಆಸರೆ; ರಾಜಸ್ಥಾನ್‌ಗೆ ಪೈಪೋಟಿಯುತ ಗುರಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದಿನಿಂದ ( ಮೇ 19 ) ತಂಡಗಳ ಕೊನೆಯ ಪಂದ್ಯಗಳು ಜರುಗಲಿವೆ. ಇಂದು ನಡೆಯುತ್ತಿರುವ ಲೀಗ್ ಹಂತದ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಸ್ಯಾಮ್ ಕರನ್ ಹಾಗೂ ಜಿತೇಶ್ ಶರ್ಮಾ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ187 ರನ್ ಕಲೆಹಾಕಿದ್ದು, ತಮ್ಮ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 188 ರನ್‌ಗಳ ಗುರಿಯನ್ನು ನೀಡಿದೆ.
ಪಂಜಾಬ್ ಕಿಂಗ್ಸ್ ಪರ ಆರಂಭಿಕ ಆಟಗಾರರಾಗಿ ಪ್ರಭ್‌ಸಿಮ್ರಾನ್ ಸಿಂಗ್ ಹಾಗೂ ನಾಯಕ ಶಿಖರ್ ಧವನ್ ಕಣಕ್ಕಿಳಿದರು. ಪ್ರಭ್‌ಸಿಮ್ರಾನ್ ಸಿಂಗ್ 2 ರನ್ ಗಳಿಸಿದರೆ, ಶಿಖರ್ ಧವನ್ 17 ರನ್ ಗಳಿಸಿದರು. ಇನ್ನುಳಿದಂತೆ ಅಥರ್ವ ಥೈದೆ 19, ಲಿಯಾಮ್ ಲಿವಿಂಗ್‌ಸ್ಟನ್ 9 ರನ್ ಗಳಿಸಿದರು. ನಂತರ ಕಣಕ್ಕಿಳಿದ ತ್ರಿಮೂರ್ತಿಗಳಾದ ಸ್ಯಾಮ್ ಕರನ್, ಜಿತೇಶ್ ಶರ್ಮಾ ಹಾಗೂ ಶಾರುಖ್ ಖಾನ್ ಭರ್ಜರಿ ಇನ್ನಿಂಗ್ಸ್ ಕಟ್ಟುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.
ಜಿತೇಶ್ ಶರ್ಮಾ 28 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಬೌಂಡರಿ ಸಹಿತ 44 ರನ್ ಗಳಿಸಿದರೆ, ಸ್ಯಾಮ್ ಕರನ್ 31 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 49 ರನ್ ಬಾರಿಸಿದರು ಹಾಗೂ ಶಾರುಖ್ ಖಾನ್ 23 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 41 ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ನವ್‌ದೀಪ್ ಸೈನಿ 3 ವಿಕೆಟ್ ಹಾಗೂ ಆಡಂ ಜಂಪಾ ಮತ್ತು ಟ್ರೆಂಟ್ ಬೌಲ್ಟ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು:
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ ಹಾಗೂ ವಿಕೆಟ್ ಕೀಪರ್ ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆಡಮ್ ಜಂಪಾ, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಅಥರ್ವ ಟೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications