PBKS vs RR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ನಿನ್ನೆ ( ಮೇ 18 ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತದ 65 ಪಂದ್ಯಗಳು ಮುಕ್ತಾಯಗೊಂಡಿವೆ.
ಈ ಪಂದ್ಯದ ಬಳಿಕ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಎಲ್ಲಾ ತಂಡಗಳೂ ಸಹ 13 ಪಂದ್ಯಗಳನ್ನು ಆಡಿ ಮುಗಿಸಿದ್ದು, ಇಂದಿನಿಂದ ( ಮೇ 19 ) ತಂಡಗಳ ಕೊನೆಯ ಪಂದ್ಯಗಳು ಜರುಗಲಿವೆ. ಇಂದು ನಡೆಯುತ್ತಿರುವ ಲೀಗ್ ಹಂತದ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ ಹಾಗೂ ವಿಕೆಟ್ ಕೀಪರ್ ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆಡಮ್ ಜಂಪಾ, ಟ್ರೆಂಟ್ ಬೌಲ್ಟ್, ನವದೀಪ್ ಸೈನಿ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಅಥರ್ವ ಟೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್
ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications