Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಕ್ವಾಲಿಫಯರ್ 1: ಚೆನ್ನೈ vs ಗುಜರಾತ್ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023 Qualifier 1: Chennai Super Kings vs Gujarat Titans toss report, playing 11 & live score

ಕಳೆದ ಮಾರ್ಚ್ ತಿಂಗಳಾಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಯದ ಸನಿಹಕ್ಕೆ ಬಂದಿದೆ. ಲೀಗ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ.

ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿದ್ದ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ 1 ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯ ಇಂದು ( ಮೇ 23 ) ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ತಲುಪಲಿದ್ದು, ಸೋಲಲಿರುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಎಲಿಮಿನೇಟರ್ ಗೆದ್ದು ಬರುವ ತಂಡದ ಜತೆ ಕಣಕ್ಕಿಳಿಯಲಿದೆ.

ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗಗಳು:

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ, ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ಪಂದ್ಯದ ಲೈವ್ ಸ್ಕೋರ್

1
57446

Story first published: Tuesday, May 23, 2023, 19:27 [IST]
Other articles published on May 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+