For Quick Alerts
ALLOW NOTIFICATIONS  
For Daily Alerts
 

IPL 2023: ಫೈನಲ್ ಸುತ್ತಿಗೇರಲು ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ ಕಾದಾಟ: Live score

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಎರಡನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಗುಜರಾತ್ ಟೈಟನ್ಸ್ ತಂಡ 15 ರನ್‌ಗಳ ಅಂತರದಿಂದ ಸೋಲು ಅನುಭವಿಸುವ ಮೂಲಕ ನೇರವಾಗಿ ಫೈನಲ್‌ಗೆ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿತು. ಇದೀಗ ಮತ್ತೊಂದುಯ ಅವಕಾಶ ಪಡೆದುಕೊಂಡಿರುವ ಜಿಟಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಡಲಿದೆ. ಶುಕ್ರವಾರ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶಿಸಲಿದೆ.

IPL 2023, Qualifier 2: Gujarat Titans vs Mumbai Indians, Toss report, playing XI and Live score

Live ಸ್ಕೋರ್ ಹೀಗಿದೆ

1
57448

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣೆಸಾಡಿತ್ತು. ಈ ಪಂದ್ಯದಲ್ಲಿ ಅಮೋಘ 81 ರನ್‌ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆದ್ದು ಆತ್ಮವಿಶ್ವಾಸದೊಂದಿಗೆ ಕ್ವಾಲಿಫಯರ್ ಪಂದ್ಯವನ್ನಾಡಲು ಸಜ್ಜಾಗಿದೆ. ತಂಡದ ಬಹುತೇಕ ಆಟಗಾರರು ಲಯದಲ್ಲಿದ್ದು ಬೌಲಿಂಗ್‌ನಲ್ಲಿಯೂ ಮುಂಬೈ ಇಂಡಿಯನ್ಸ್ ತಂಡದ ಬಲ ಹೆಚ್ಚಿದಂತೆ ಭಾಸವಾಗುತ್ತಿದೆ.

ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಮತ್ತೊಂದು ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಅಹ್ಮದಾಬಾದ್‌ನ ಈ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲ ನೀಡಲಿದ್ದು ಬೌಲರ್‌ಗಳು ದಂಡನೆಗೆ ಒಳಗಾಗುವುದು ಖಚಿತ. ಆರಂಬದಲ್ಲಿ ವೇಗಗಳಿಗೆ ಸ್ವಿಂಗ್ ಮೂಲಕ ನೆರವು ನೀಡುವ ಸಾಧ್ಯತೆಯಿದೆ. ಅಂತಿಮ ಹಂತದಲ್ಲಿ ಸ್ಪಿನ್ನರ್‌ಗಳು ಇಲ್ಲಿ ಮಿಂಚುವ ಅವಕಾಶವಿದೆ.

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಕ್ಯಾಮೆರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್

Story first published: Friday, May 26, 2023, 19:20 [IST]
Other articles published on May 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+