Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RR: ಗುಜರಾತ್ ಟೈಟನ್ಸ್ ಬೌಲಿಂಗ್ ಮುಂದೆ ನಡೆಯದ ರಾಯಲ್ಸ್ ಆಟ; 118ಕ್ಕೆ ಆಲ್ಔಟ್

IPL 2023: Rajasthan Royals all out for 118 and gives the target of 119 runs to Gujarat Titans

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 48ನೇ ಪಂದ್ಯ ಇಂದು ( ಮೇ 5 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸಮ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದರು.

ಅದರಂತೆ ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡ ನಿರೀಕ್ಷಿಸಿದ ಪ್ರದರ್ಶನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ರಾಜಸ್ಥಾನ್ ರಾಯಲ್ಸ್ ತಂಡ 17.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 118 ರನ್ ಗಳಿಸಿ ಆಲ್ಔಟ್ ಆಗಿದ್ದು, ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 119 ರನ್‌ಗಳ ಗುರಿಯನ್ನು ನೀಡಿದೆ.

ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಕಣಕ್ಕಿಳಿದರು. ಜೋಸ್ ಬಟ್ಲರ್ 8 ರನ್ ಗಳಿಸಿ ನಿರ್ಗಮಿಸಿದರೆ, ಯಶಸ್ವಿ ಜೈಸ್ವಾಲ್ 11 ಎಸೆತಗಳಲ್ಲಿ 14 ರನ್ ಗಳಿಸಿದ್ದಾಗ ರನ್ ಔಟ್ ಆದರು. ಹೀಗೆ ಕೆಟ್ಟ ಆರಂಭ ಪಡೆದುಕೊಂಡ ರಾಜಸ್ಥಾನ್ ರಾಯಲ್ಸ್ ಪರ ಉಳಿದಂತೆ ಸಂಜು ಸ್ಯಾಮ್ಸನ್ 20 ಎಸೆತಗಳಲ್ಲಿ 30 ರನ್, ದೇವದತ್ ಪಡಿಕ್ಕಲ್ 12 ರನ್, ರವಿಚಂದ್ರನ್ ಅಶ್ವಿನ್ 2 ರನ್, ರಿಯಾನ್ ಪರಾಗ್ 4 ರನ್, ಶಿಮ್ರಾನ್ ಹೆಟ್ಮಾಯೆರ್ 7 ರನ್, ಧ್ರುವ್ ಜುರೆಲ್ 9 ರನ್, ಟ್ರೆಂಟ್ ಬೌಲ್ಟ್ 15 ರನ್, ಆಡಂ ಜಂಪಾ 7 ರನ್ ಹಾಗೂ ಸಂದೀಪ್ ಶರ್ಮಾ ಅಜೇಯ 2 ರನ್ ಗಳಿಸಿದರು.

ಹೀಗೆ ನಾಯಕ ಸಂಜು ಸ್ಯಾಮ್ಸನ್ ಹೊರತುಪಡಿಸಿ ರಾಜಸ್ಥಾನ್ ರಾಯಲ್ಸ್ ತಂಡದ ಯಾವೊಬ್ಬ ಆಟಗಾರನೂ ಸಹ ಇಪ್ಪತ್ತು ರನ್‌ಗಳ ಗಡಿ ದಾಟದೇ ಇದ್ದು, ತಂಡ ಮಂಕಾಗಿದೆ.

ಗುಜರಾತ್ ಟೈಟನ್ಸ್ ಪರ ರಶೀದ್ ಖಾನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ 4 ಓವರ್‌ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರೆ, ಉಳಿದಂತೆ ನೂರ್ ಅಹ್ಮದ್ 2 ವಿಕೆಟ್, ಜೋಶ್ವಾ ಲಿಟಲ್, ಮೊಹಮ್ಮದ್ ಶಮಿ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್

Story first published: Friday, May 5, 2023, 21:25 [IST]
Other articles published on May 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+