KKR vs RR: ಜೈಸ್ವಾಲ್, ಸ್ಯಾಮ್ಸನ್ ಅಬ್ಬರ; 13.1 ಓವರ್‌ಗಳಲ್ಲಿಯೇ ಚೇಸ್ ಮಾಡಿ ಗೆದ್ದ ರಾಜಸ್ಥಾನ್!

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 56 ನೇ ಪಂದ್ಯ ಇಂದು ( ಮೇ 11 ) ನಡೆದಿದ್ದು, ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಫೀಲ್ಡಿಂಗ್ ಮಾಡುವ ಆಯ್ಕೆ ಮಾಡಿಕೊಂಡು ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 150 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಕೇವಲ 13.1 ಓವರ್‌ಗಳಲ್ಲಿಯೇ ಬೆನ್ನತ್ತಿರುವ ರಾಜಸ್ಥಾನ್ ರಾಯಲ್ಸ್ 9 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಹೌದು, ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಅಬ್ಬರದ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 13.1 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿದೆ.
ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 13 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 98 ರನ್ ಚಚ್ಚಿದರೆ, ಜೈಸ್ವಾಲ್ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಜೋಸ್ ಬಟ್ಲರ್ 3 ಎಸೆತಗಳಲ್ಲಿ ಯಾವುದೇ ರನ್ ಗಳಿಸದೇ ಡಕ್ ಔಟ್ ಆದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಸಂಜು ಸ್ಯಾಮ್ಸನ್ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 48 ರನ್ ಚಚ್ಚಿದರು.
ಇನ್ನು ಯಶಸ್ವಿ ಜೈಸ್ವಾಲ್ 13 ಎಸೆತಗಳಲ್ಲಿಯೇ 50 ರನ್ ಬಾರಿಸುವುದರ ಮೂಲಕ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ಅತಿವೇಗದ ಐಪಿಎಲ್ ಅರ್ಧಶತಕದ ದಾಖಲೆಯನ್ನು ಮುರಿದು ಹಾಕಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇನ್ನಿಂಗ್ಸ್: ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕ ಆಟಗಾರರಾಗಿ ಜೇಸನ್ ರಾಯ್ ಹಾಗೂ ರಹ್ಮನ್ನುಲ್ಲಾ ಗುರ್ಬಜ್ ಕಣಕ್ಕಿಳಿದರು. ಈ ಪೈಕಿ ಜೇಸನ್ ರಾಯ್ 8 ಎಸೆತಗಳಲ್ಲಿ 10 ರನ್, ರಹ್ಮನ್ನುಲ್ಲಾ ಗುರ್ಬಜ್ 12 ಎಸೆತಗಳಲ್ಲಿ 18 ರನ್ ಕಲೆಹಾಕಿದರು. ಇನ್ನುಳಿದಂತೆ ವೆಂಕಟೇಶ್ ಐಯ್ಯರ್ 42 ಎಸೆತಗಳಲ್ಲಿ 57 ರನ್, ನಿತಿಶ್ ರಾಣಾ 17 ಎಸೆತಗಳಲ್ಲಿ 22 ರನ್, ಆಂಡ್ರೆ ರಸೆಲ್ 10 ಎಸೆತಗಳಲ್ಲಿ 10 ರನ್, ರಿಂಕು ಸಿಂಗ್ 18 ಎಸೆತಗಳಲ್ಲಿ 16 ರನ್, ಶಾರ್ದೂಲ್ ಠಾಕೂರ್ 2 ಎಸೆತಗಳಲ್ಲಿ 1 ರನ್, ಸುನಿಲ್ ನರೇನ್ 5 ಎಸೆತಗಳಲ್ಲಿ 6 ರನ್, ಅನುಕುಲ್ ರಾಯ್ 6 ಎಸೆತಗಳಲ್ಲಿ ಅಜೇಯ 6 ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಯುಜ್ವೇಂದ್ರ ಚಹಲ್ 4 ವಿಕೆಟ್, ಟ್ರೆಂಟ್ ಬೌಲ್ಟ್ 2 ವಿಕೆಟ್, ಸಂದೀಪ್ ಶರ್ಮಾ ಹಾಗೂ ಕೆಎಂ ಆಸಿಫ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಗಳಗಳು:
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಅನುಕೂಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications