ಐಪಿಎಲ್ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಎರಡು ತಂಡಗಳು ಕೂಡ ಟೂರ್ನಿಯಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಇದೀಗ ಪರಸ್ಪರ ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಕುತೂಹಲ ಮೂಡಿಸಿದೆ.
ಈ ಪಂದ್ಯದ ಟಾಸ್ ಸಂದರ್ಭದಲ್ಲಿ ರಾಜಸ್ಥಾನ್ ರಾಯಲ್ಸ ತಂಡದ ನಾಯಕ ಸಂಜು ಸ್ಯಾಮ್ಸನ್ ಪ್ರತಿಕ್ರಿಯಿಸಿದ್ದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಸೆಣೆಸಾಟದ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. ಎಂಎಸ್ ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಆಡುವುದು ಗೌರವ ಎಂದಿದ್ದಾರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್.

ರಾಜಸ್ಥಾನ್ ರಾಯಲ್ಸ್ ತಂಡ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದು ಮೂರನೇ ಗೆಲುವಿನ ನಿರೀಕ್ಷೆಯಲ್ಲಿದ್ದು ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವತ್ತ ಚಿತ್ತ ನೆಟ್ಟಿದೆ. ಆದರೆ ಅಂಕಿಅಂಶಗಳು ರಾಜಸ್ಥಾನ್ ರಾಯಲ್ಸ್ ತಮಡದ ವಿರುದ್ಧವಾಗಿಯೇ ಇದೆ. ಚೆಪಾಕ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 2008ರ ಬಳಿಕ ಈವರೆಗ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಸಂಜು ಸ್ಯಾಮ್ಸನ್ ತಾವು ಕೂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಉದ್ಧೇಶ ಹೊಂದಿದ್ದೆವು ಎಂದಿದ್ದಾರೆ. "ನಾವು ಕೂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸಲು ಬಯಸಿದ್ದೆವು. ನಮ್ಮ ಲಯವನ್ನು ಮುಂದುವರಿಸಲು ಇದು ಮುಖ್ಯವಾಗಿದೆ. ಚೆಪಾಕ್‌ಗೆ ಬಂದು ಚೆನ್ನೈ ತಂಡವನ್ನು ಹಾಗೂ ಎಂಎಸ್ ಧೋನಿ ಅವರನ್ನು ಎದುರಿಸುವುದು ಬಹಳ ಗೌರವದ ವಿಚಾರ" ಎಂದಿದ್ದಾರೆ ಸಂಜು ಸ್ಯಾಮ್ಸನ್.
ಇನ್ನು ಈ ಪಂದ್ಯದಲ್ಲಿ ಚೆನ್ನ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಇದು ಸಿಎಸ್‌ಕೆ ನಾಯಕನಾಗಿ ಎಂಎಸ್ ಧೋನಿ ಅವರು 200ನೇ ಪಂದ್ಯದಲ್ಲಿ ಮುನ್ನಡೆಸುತ್ತಿರುವ ಪಂದ್ಯವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಸಿಸಂದ ಮಗಲ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್
ಬೆಂಚ್: ಅಂಬಾಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಶೇಕ್ ರಶೀದ್, ಸುಭ್ರಾಂಶು ಸೇನಾಪತಿ, ಆರ್‌ಎಸ್ ಹಂಗರ್ಗೇಕರ್, ಬೆನ್ ಸ್ಟೋಕ್ಸ್, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಮಥೀಶ ಪತಿರಾನ, ಭಗತ್ ವರ್ಮಾ, ನಿಶಾಂತ್ ಸಿಂಧು, ದೀಪಕ್ ಚಾಹರ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಕುಲದೀಪ್ ಸೇನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ರಿಯಾನ್ ಪರಾಗ್, ಡೊನಾವನ್ ಫೆರೇರಾ, ಕೆಎಂ ಆಸಿಫ್, ಆಡಮ್ ಝಂಪಾ, ಜೋ ರೂಟ್, ಮುರುಗನ್ ಅಶ್ವಿನ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಯಾದವ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್, ಟ್ರೆಂಟ್ ಬೌಲ್ಟ್