IPL 2023: ಶಿಖರ್ ಧವನ್, ಪ್ರಭ್‌ಸಿಮ್ರಾನ್ ಅರ್ಧಶತಕ; ರಾಜಸ್ಥಾನ ರಾಯಲ್ಸ್‌ಗೆ ಕಠಿಣ ಗುರಿ ನೀಡಿದ ಪಂಜಾಬ್
ಬುಧವಾರ, ಏಪ್ರಿಲ್ 5ರಂದು ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 8ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿದ್ದು, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡಕ್ಕೆ 198 ರನ್‌ಗಳ ಗುರಿ ನೀಡಿದೆ.

ಪಂಜಾಬ್ ಕಿಂಗ್ಸ್ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ಶಿಖರ್ ಧವನ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 9.1 ಓವರ್‌ಗಳಲ್ಲಿ 90 ರನ್‌ಗಳ ಜೊತೆಯಾಟವಾಡಿದರು. ಪ್ರಭ್‌ಸಿಮ್ರಾನ್ ಸಿಂಗ್ 34 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 60 ರನ್ ಬಾರಿಸಿ ಔಟಾದರು.
ನಂತರ ಬಂದ ಭಾನುಕ ರಾಜಪಕ್ಸ 1 ರನ್ ಗಳಿಸಿ ಆಡುತ್ತಿದ್ದಾಗ ಗಾಯಗೊಂಡು ನಿವೃತ್ತಿ ಪಡೆದರು. ಬಳಿಕ ಕ್ರೀಸ್‌ಗಿಳಿದ ಜಿತೇಶ್ ಶರ್ಮಾ 16 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 27 ರನ್ ಗಳಿಸಿದರು. ಶಾರೂಖ್ ಖಾನ್ 10 ಎಸೆತಗಳಲ್ಲಿ 11 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 86 ರನ್ ಬಾರಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸುವಲ್ಲಿ ನೆರವಾದರು.
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಜೇಸನ್ ಹೋಲ್ಡರ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 4 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು ಮತ್ತು ಯುಜ್ವೇಂದ್ರ ಚಾಹಲ್ 4 ಓವರ್‌ಗಳಲ್ಲಿ 29 ರನ್ ನೀಡಿ 50 ರನ್ ನೀಡಿ 1 ವಿಕೆಟ್ ಪಡೆದರು.
ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ
ರಾಜಸ್ಥಾನ ರಾಯಲ್ಸ್ ತಂಡ: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಭಾನುಕ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಝಾ, ಶಾರುಖ್ ಖಾನ್, ಸ್ಯಾಮ್ ಕರ್ರಾನ್, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.
ಪಂಜಾಬ್ ಕಿಂಗ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications