IPL 2023 Retention : ರಾಜಸ್ಥಾನ್ ರಾಯಲ್ಸ್‌ನಲ್ಲಿ ಉಳಿದುಕೊಂಡ, ಡ್ರಾಪ್ ಆದ ಆಟಗಾರರ ಪಟ್ಟಿ

ಕಳೆದ ಬಾರಿಯ ರನ್ನರ್-ಅಪ್ ರಾಜಸ್ಥಾನ್ ರಾಯಲ್ಸ್ ತಂಡವು ಮಂಗಳವಾರ ಐಪಿಎಲ್ 2023ಕ್ಕೆ ಮುಂಚಿತವಾಗಿ ತಮ್ಮ ಉಳಿಸಿಕೊಂಡಿರುವ ಮತ್ತು ಕೈಬಿಟ್ಟಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಇಂದು (ನವೆಂಬರ್ 15) ಎಲ್ಲ ತಂಡಗಳು ತಮ್ಮ ರಿಟೇನ್ ಮತ್ತು ಕೈಬಿಡುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಕೊನೆಯ ದಿನವಾಗಿತ್ತು.
ಐಪಿಎಲ್ ಮೊದಲ ಆವೃತ್ತಿಯ ಚಾಂಪಿಯನ್ ತಂಡವಾದ ರಾಜಸ್ಥಾನ ರಾಯಲ್ಸ್ ಕಳೆದ ವರ್ಷ ತಮ್ಮ ಪ್ರದರ್ಶನವನ್ನು ಪುನರಾವರ್ತಿಸಲು ಪ್ರಯತ್ನಿಸಿದರು. ಆದರೆ ಫೈನಲ್ ಪಂದ್ಯದಲ್ಲಿ ಹೊಸ ತಂಡವಾದ ಗುಜರಾತ್ ಟೈಟನ್ಸ್ ವಿರುದ್ಧ ಸೋಲುವ ಮೂಲಕ ಪ್ರಶಸ್ತಿ ಕನಸು ಕೈಬಿಟ್ಟರು.
2008ರಲ್ಲಿ ಐಪಿಎಲ್‌ನ ಉದ್ಘಾಟನಾ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದ ರಾಜಸ್ಥಾನ ರಾಯಲ್ಸ್ ತಂಡ ಮತ್ತೊಮ್ಮೆ ಫೈನಲ್ ಪ್ರವೇಶಿಸಲು ಸುಮಾರು 14 ವರ್ಷಗಳ ಕಾಲ ಕಾಯಬೇಕಾಯಿತು. ಆದರೆ ತಮ್ಮ ಮುಂದಿನ ಆವೃತ್ತಿಯಲ್ಲಿ ಕಳೆದ ವರ್ಷದ ಪ್ರದರ್ಶನವನ್ನು ಇನ್ನಷ್ಟು ಉತ್ತಮವಾಗಿಸಲು ಎದುರು ನೋಡುತ್ತಿದೆ.

ಇನ್ನು ತಿಳಿದುಕೊಳ್ಳಬೇಕಾದ ವಿಷಯವೆಂದರೆ, ಐಪಿಎಲ್ 2023ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿದೆ.
ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ತಂಡದ ನಾಯಕ ಸಂಜು ಸ್ಯಾಮ್ಸನ್, ಇಂಗ್ಲೆಂಡ್‌ನ ಟಿ20 ವಿಶ್ವಕಪ್ ವಿಜೇತ ನಾಯಕ ಜೋಸ್ ಬಟ್ಲರ್, ಭಾರತದ ಸ್ಪಿನ್ ಜೋಡಿಗಳಾದ ರವಿಚಂದ್ರನ್ ಅಶ್ವಿನ್ ಮತ್ತು ಯುಜವೇಂದ್ರ ಚಹಾಲ್, ಅನುಭವಿ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್, ಭಾರತೀಯ ತಂಡದ ಆಟಗಾರರಾದ ನವದೀಪ್ ಸೈನಿ, ಕನ್ನಡಿಗರಾದ ಪ್ರಸಿದ್ಧ್ ಕೃಷ್ಣ ಮತ್ತು ದೇವದತ್ ಪಡಿಕ್ಕಲ್ ಅವರನ್ನು ಉಳಿಸಿಕೊಂಡಿದೆ. ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಶಿಮ್ರಾನ್ ಹೆಟ್ಮೆಯರ್ ಮತ್ತು ಬೌಲರ್ ಒಬೆಡ್ ಮೆಕಾಯ್ ಸೇರಿದಂತೆ ಹಲವು ಆಟಗಾರರನ್ನು ಉಳಿಸಿಕೊಳ್ಳಲಾಗಿದೆ.
ಇನ್ನು ಡೇರಿಲ್ ಮಿಚೆಲ್, ಜಿಮ್ಮಿ ನೀಶಾಮ್, ಕರುಣ್ ನಾಯರ್, ನೇಥನ್ ಕುಲ್ಟರ್ ನೈಲ್ ಸೇರಿದಂತೆ ಕೆಲವು ಆಟಗಾರರನ್ನು ತಂಡದಿಂದ ಕೈಬಿಡಲಾಗಿದ್ದು, ಸದ್ಯ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಬಳಿ ಮಿನಿ ಹರಾಜಿನಲ್ಲಿ ಖರ್ಚು ಮಾಡಲು 13.2 ಕೋಟಿ ರೂ. ಪರ್ಸ್‌ನಲ್ಲಿದೆ.
ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಉಳಿದುಕೊಂಡ ಆಟಗಾರರ ಪಟ್ಟಿ
ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್.
ರಾಜಸ್ಥಾನ್ ರಾಯಲ್ಸ್ ತಂಡ ಕೈಬಿಟ್ಟರುವ ಆಟಗಾರರ ಪಟ್ಟಿ
ಅನುನಯ್ ಸಿಂಗ್, ಕಾರ್ಬಿನ್ ಬಾಷ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಾಮ್, ಕರುಣ್ ನಾಯರ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವಾನ್ ಡೆರ್ ಡುಸ್ಸೆನ್, ಶುಭಂ ಗರ್ವಾಲ್, ತೇಜಸ್ ಬರೋಕಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications