For Quick Alerts
ALLOW NOTIFICATIONS  
For Daily Alerts
 

IPL2023: 25 ಪಂದ್ಯಗಳ ಮುಕ್ತಾಯದ ಬಳಿಕ ಅಂಕಪಟ್ಟಿ ಹೇಗಿದೆ? 5 ತಂಡಗಳದ್ದು ಸರಿಸಮನಾದ ಅಂಕ!

IPL 2023: Rajasthan Royals tops the points table after 25 matches; 5 teams got equal points

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 25 ಪಂದ್ಯಗಳು ನಿನ್ನೆ ( ಏಪ್ರಿಲ್ 18 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಮೂಲಕ ಮುಕ್ತಾಯವಾಗಿವೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮುಂಬೈ ಇಂಡಿಯನ್ಸ್ ತಂಡ ಸೋಲುಣಿಸಿ ಸತತ ಮೂರನೇ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಇಶಾನ್ ಕಿಶನ್, ಕೆಮರೂನ್ ಗ್ರೀನ್ ಹಾಗೂ ತಿಲಕ್ ವರ್ಮಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ192 ರನ್ ಕಲೆಹಾಕಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 193 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವ ಭರವಸೆಯನ್ನು ಹುಟ್ಟುಹಾಕಿದ್ದ ಸನ್ ರೈಸರ್ಸ್ ಹೈದರಾಬಾದ್ ಅಂತಿಮ ಹಂತದಲ್ಲಿ ವಿಫಲವಾಗಿ 19.5 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲ್ ಔಟ್ ಆಗಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 14 ರನ್‌ಗಳ ಗೆಲುವನ್ನು ಕಂಡಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಮಯಾಂಕ್ ಅಗರ್ವಾಲ್ ಅವರ ಜವಾಬ್ದಾರಿಯುತ ಆಟ ಹಾಗೂ ಹೈನ್ರಿಚ್ ಕ್ಲಾಸೀನ್ ಅವರ ಸ್ಪೋಟಕ ಆಟ ವ್ಯರ್ಥವಾಗಿದೆ. ಈ ಗೆಲವಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ತುಸು ಬದಲಾವಣೆಗಳನ್ನು ಕಂಡಿದೆ.

ಹಾಗಿದ್ದರೆ ಟೂರ್ನಿಯ ಈ 25ನೇ ಪಂದ್ಯದ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಎಷ್ಟನೇ ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 5 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

3. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

5. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

7. 5 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 5 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9. 5 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 5 ಪಂದ್ಯಗಳನ್ನಾಡಿ ಗೆಲುವಿನ ಖಾತೆಯನ್ನೇ ತೆರೆಯದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಅಂಕಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್, ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಸರಿ ಸಮನಾದ ಅಂಕಗಳನ್ನು ಪಡೆದುಕೊಂಡಿದ್ದು, ಉತ್ತಮ ನೆಟ್ ರನ್ ರೇಟ್ ಹೊಂದಿರುವ ತಂಡ ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ.

Story first published: Wednesday, April 19, 2023, 9:53 [IST]
Other articles published on Apr 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+