CSK vs RR: 27 ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 37ನೇ ಪಂದ್ಯ ಇಂದು ( ಏಪ್ರಿಲ್ 27 ) ಜರುಗುತ್ತಿದ್ದು, ಈ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಜೈಪುರದ ಸಾವೈ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದು ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯವಾಗಿದೆ. ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಕಂಡರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿಕೆ ಕಾಣಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನದ ಪಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಂಡಿದ್ದ ಸೋಲಿನ ಸೇಡನ್ನು ಸಹ ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಇನ್ನು ಉಭಯ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ 28ನೇ ಮುಖಾಮುಖಿ ಪಂದ್ಯವಾಗಿದ್ದು ಇಲ್ಲಿಯವರೆಗೂ ನಡೆಯಲಿರುವ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದ್ದರೆ ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಐಪಿಎಲ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಚೆನ್ನೈನ ಎಂ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 176 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಗಿತ್ತು. ಅಂತಿಮ ಹಂತದ ಓವರ್‌ಗಳಲ್ಲಿ ಫಿನಿಷರ್ ಎಂದೇ ಖ್ಯಾತಿಯನ್ನು ಪಡೆದಿರುವ ಎಂ ಎಸ್ ಧೋನಿ ಹಾಗೂ ರವೀಂದ್ರ ಜಡೇಜಾ ಇದ್ದರೂ ಸಹ ರಾಜಸ್ಥಾನ್ ರಾಯಲ್ಸ್ ನೀಡಿದ್ದ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಮುಟ್ಟಲಿಲ್ಲ. 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್‌ಗಳನ್ನು ಕಲೆಹಾಕಿತ್ತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್‌ನ ತವರು ನೆಲದಲ್ಲಿಯೇ 3 ರನ್‌ಗಳ ಅಂತರದಲ್ಲಿ ಸೋಲಿಸಿತ್ತು.
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 5 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಎರಡು ಮುಖಾಮುಖಿ ಪಂದ್ಯಗಳನ್ನಾಡಿದ್ದವು.
ಆ ಬಾರಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 45 ರನ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು ಹಾಗೂ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 7 ವಿಕೆಟ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು. ಈ ಮೂಲಕ ಇತ್ತೀಚೆಗಿನ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications