Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs LSG: ರಾಜಸ್ಥಾನ್ vs ಲಕ್ನೋ ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್ ಹೀಗಿರಲಿ

IPL 2023: Rajasthan Royals vs Lucknow Super Giants dream team prediction and probable 11

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 26ನೇ ಪಂದ್ಯ ಇಂದು ( ಏಪ್ರಿಲ್ 19 ) ಟೇಬಲ್ ಟಾಪರ್ಸ್‌ಗಳು ಮುಖಾಮುಖಿಯಾಗುತ್ತಿವೆ. ಹೌದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಡಲಿವೆ.

ಜೈಪುರದ ಸಾವೈ ಮಾನ್‌ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಸಂಜೆ 7.30ಕ್ಕೆ ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡುವಿನ ಮೊದಲ ಮುಖಾಮುಖಿ ಇದಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತನ್ನ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿದ್ದು ಹಿನ್ನಡೆಯಾಗಿದ್ದರೆ, ನಾಯಕ ಕೆಎಲ್ ರಾಹುಲ್ ಕಮ್ ಬ್ಯಾಕ್ ಮಾಡಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಗೆಲುವು ಸಾಧಿಸಿದೆ. ಒಟ್ಟಿನಲ್ಲಿ ಎರಡೂ ತಂಡಗಳೂ ಸಹ ಪರಸ್ಪರ ತೀವ್ರ ಪೈಪೋಟಿ ನಡೆಸಲು ಸಿದ್ಧವಾಗಿವೆ. ಒಂದೆಡೆ ಈ ಪಂದ್ಯದಲ್ಲಿ ಯಾವ ತಂಡಗಳು ಗೆಲ್ಲಬಹುದು, ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂಬ ಚರ್ಚೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸಿ ಫ್ಯಾಂಟಸಿ ಗೇಮ್‌ಗಳಲ್ಲಿ ಭಾಗವಹಿಸಲು ಸಿದ್ಧರಾಗುತ್ತಿದ್ದಾರೆ.

ಹೀಗೆ ಫ್ಯಾಂಟಸಿ ಗೇಮ್ ಆಡಲು ಸಿದ್ಧರಿರುವವರು ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಈ ಕೆಳಕಂಡ ಆಟಗಾರರನ್ನು ಆಯ್ದುಕೊಳ್ಳುವುದು ಉತ್ತಮ ಆಯ್ಕೆ ಎನ್ನಬಹುದು.

ಡ್ರೀಮ್ ಟೀಮ್ 1: ವಿಕೆಟ್‌ಕೀಪರ್‌ಗಳು: ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ನಿಕೋಲಸ್ ಪೂರನ್

ಬ್ಯಾಟರ್ಸ್: ಕೆಎಲ್ ರಾಹುಲ್ (ಉಪನಾಯಕ), ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್ (ನಾಯಕ)

ಆಲ್ ರೌಂಡರ್: ಕೃನಾಲ್ ಪಾಂಡ್ಯ

ಬೌಲರ್‌ಗಳು: ಯುಜ್ವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್, ಮಾರ್ಕ್ ವುಡ್, ರವಿ ಬಿಷ್ಣೋಯ್

ಡ್ರೀಮ್ ಟೀಮ್ 2: ವಿಕೆಟ್ ಕೀಪರ್: ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಉಪನಾಯಕ)

ಬ್ಯಾಟರ್ಸ್: ಕೆಎಲ್ ರಾಹುಲ್ (ನಾಯಿಕ), ಶಿಮ್ರಾನ್ ಹೆಟ್ಮೆಯರ್, ದೀಪಕ್ ಹೂಡಾ

ಆಲ್‌ರೌಂಡರ್‌ಗಳು: ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೊಯಿನಿಸ್

ಬೌಲರ್‌ಗಳು: ಯುಜ್ವೇಂದ್ರ ಚಹಾಲ್, ಸಂದೀಪ್ ಶರ್ಮಾ, ಮಾರ್ಕ್ ವುಡ್, ರವಿ ಬಿಷ್ಣೋಯ್

ಪಂದ್ಯದ ಸಂಭಾವ್ಯ ಆಡುವ ಬಳಗಗಳು:

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಹಾಗೂ ವಿಕೆಟ್ ಕೀಪರ್), ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್ ಮತ್ತು ಸಂದೀಪ್ ಶರ್ಮಾ.

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್/ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ರವಿ ಬಿಷ್ಣೋಯ್, ಅವೇಶ್ ಖಾನ್, ಮಾರ್ಕ್ ವುಡ್ ಮತ್ತು ಯುಧ್ವೀರ್ ಸಿಂಗ್ ಚರಕ್.

Story first published: Wednesday, April 19, 2023, 15:47 [IST]
Other articles published on Apr 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+