
ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದು ತಲುಪಿದೆ.
ನಿನ್ನೆ ( ಮೇ 18 ) ಹೈದರಾಬಾದ್‌ನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಮೂಲಕ ಟೂರ್ನಿಯಲ್ಲಿ ಎಲ್ಲಾ ತಂಡಗಳು 13 ಪಂದ್ಯಗಳನ್ನು ಆಡಿ ಮುಗಿಸಿದಂತಾಗಿದೆ.
ಈ ಮೂಲಕ ಸದ್ಯ ಇಂದಿನಿಂದ ( ಮೇ 19 ) ಎಲ್ಲಾ ತಂಡಗಳ ಅಂತಿಮ ಹಣಾಹಣಿ ಆರಂಭವಾಗುತ್ತಿದೆ. ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಪೈಪೋಟಿಗೆ ಬಿದ್ದಿವೆ.
ಇನ್ನು ಈ ಹಿಂದೆ ಪ್ಲೇಆಫ್ ಪ್ರವೇಶಿಸುವ ತಂಡಗಳು ಎನಿಸಿಕೊಂಡಿದ್ದ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸದ್ಯ ಇನ್ನೊಂದು ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸಹ ಪ್ಲೇಆಫ್ ಪ್ರವೇಶಿಸುವುದು ಅನುಮಾನ.
ಹೀಗೆ ಟೂರ್ನಿಯಿಂದ ಈಗಾಗಲೇ ಬಹುತೇಕ ಹೊರಬಿದ್ದಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಂದು ( ಮೇ 19 ) ನಡೆಯಲಿರುವ ಟೂರ್ನಿಯ 66ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದ್ದು, ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಹೀಗೆ ಪ್ಲೇಆಫ್ ಮೇಲೆ ಹೆಚ್ಚೇನೂ ಪರಿಣಾಮ ಬೀರದ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್ ರಚಿಸುತ್ತಿದ್ದು, ಅಂತಹ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ.
ಡ್ರೀಮ್ ಟೀಮ್ 1:
ವಿಕೆಟ್ ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ಪ್ರಭಾಸಿಮ್ರಾನ್ ಸಿಂಗ್
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್ (ನಾಯಕ)
ಆಲ್ ರೌಂಡರ್‌ಗಳು - ಲಿಯಾಮ್ ಲಿವಿಂಗ್‌ಸ್ಟೋನ್ (ಉಪನಾಯಕ), ಸ್ಯಾಮ್ ಕರ್ರಾನ್
ಬೌಲರ್‌ಗಳು - ಯುಜ್ವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್, ಅರ್ಷದೀಪ್ ಸಿಂಗ್
ಡ್ರೀಮ್ ಟೀಮ್ 2:
ವಿಕೆಟ್ ಕೀಪರ್ - ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್, ಪ್ರಭಾಸಿಮ್ರಾನ್ ಸಿಂಗ್
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್ (ಉಪನಾಯಕ), ಯಶಸ್ವಿ ಜೈಸ್ವಾಲ್
ಆಲ್ ರೌಂಡರ್‌ಗಳು - ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್
ಬೌಲರ್‌ಗಳು - ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಅರ್ಶ್‌ದೀಪ್ ಸಿಂಗ್, ನಾಥನ್ ಎಲ್ಲಿಸ್
ಸಂಭಾವ್ಯ ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಅಥರ್ವ ಟೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( ನಾಯಕ ಹಾಗೂ ವಿಕೆಟ್ ಕೀಪರ್), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಜಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್