ಬುಧವಾರ, ಏಪ್ರಿಲ್ 5ರಂದು ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 8ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಮತ್ತು ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.
2022ರ ಐಪಿಎಲ್ ಫೈನಲಿಸ್ಟ್ ರಾಜಸ್ಥಾನ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 72 ರನ್‌ಗಳ ಅಮೋಘ ಗೆಲುವಿನ ಹಿನ್ನೆಲೆಯಿಂದ ಬರುತ್ತಿದೆ. ಇನ್ನು ಇಂದಿನ ಪಂದ್ಯ ಗೆದ್ದರೆ ಮತ್ತೆ ಐಪಿಎಲ್ 2023ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲಿದೆ.

ಮತ್ತೊಂದೆಡೆ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಸಹ 2023ರ ಐಪಿಎಲ್ ಅಭಿಯಾನವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮಳೆ ಬಾಧಿತ ಪಂದ್ಯದ ಗೆಲುವಿನೊಂದಿಗೆ ಆರಂಭಿಸಿತು. ಇದೀಗ ತಮ್ಮ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ.
ರಾಜಸ್ಥಾನ ರಾಯಲ್ಸ್ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಉತ್ತಮ ಆರಂಭ ನೀಡುತ್ತಿದ್ದು, ನಂತರ ನಾಯಕ ಸಂಜು ಸ್ಯಾಮ್ಸನ್ ಕೂಡ ತಂಡಕ್ಕೆ ಅಗತ್ಯ ರನ್ ಗಳಿಸಿ ನೆರವಾಗುತ್ತಿದ್ದಾರೆ. ಇಂದಿನ ಪಂದ್ಯಕ್ಕೂ ಮುನ್ನ ಹೆಡ್ ಟು ಹೆಡ್ ನೋಡಿದರೆ, ರಾಜಸ್ಥಾನ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಮುನ್ನಡೆ ಸಾಧಿಸಿದೆ. ಐಪಿಎಲ್‌ನಲ್ಲಿ ಎರಡು ತಂಡಗಳ ನಡುವೆ ಇದುವರೆಗಿನ 24 ಪಂದ್ಯಗಳಲ್ಲಿ 14 ಪಂದ್ಯಗಳನ್ನು ಗೆದ್ದಿದೆ.

ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಸ್ಟಾರ್ ವೇಗಿ ಕಗಿಸೊ ರಬಾಡ ಆಗಮನದಿಂದ ಪಂಜಾಬ್ ಕಿಂಗ್ಸ್ ತಂಡದ ಬಲ ಹೆಚ್ಚಿಸಿದೆ. ಅರ್ಶ್‌ದೀಪ್ ಸಿಂಗ್ ಅವರೊಂದಿಗೆ ಕಗಿಸೊ ರಬಾಡ ಹೊಸ ಚೆಂಡನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.
ಐಪಿಎಲ್ 2023: ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯವು ಬುಧವಾರ, ಏಪ್ರಿಲ್ 5ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ. Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಗ ಆಗಿ ವೀಕ್ಷಿಸಬಹುದು.

ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಫ್ಯಾಂಟಸಿ ಡ್ರೀಮ್ ಟೀಂ
ವಿಕೆಟ್ ಕೀಪರ್‌ಗಳು: ಸಂಜು ಸ್ಯಾಮ್ಸನ್, ಜಿತೇಶ್ ಶರ್ಮಾ
ಬ್ಯಾಟ್ಸ್‌ಮನ್‌ಗಳು: ಜೋಸ್ ಬಟ್ಲರ್, ಶಿಖರ್ ಧವನ್, ಯಶಸ್ವಿ ಜೈಸ್ವಾಲ್, ಭಾನುಕ ರಾಜಪಕ್ಸೆ
ಆಲ್‌ರೌಂಡರ್‌ಗಳು: ಸಿಕಂದರ್ ರಝಾ, ಸ್ಯಾಮ್ ಕರ್ರಾನ್, ಜೇಸನ್ ಹೋಲ್ಡರ್
ಬೌಲರ್‌ಗಳು: ಅರ್ಶ್‌ದೀಪ್ ಸಿಂಗ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್
ನಾಯಕ: ಜೋಸ್ ಬಟ್ಲರ್, ಉಪನಾಯಕ: ದೇವದತ್ ಪಡಿಕ್ಕಲ್
ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ
ರಾಜಸ್ಥಾನ ರಾಯಲ್ಸ್ ತಂಡ: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಭಾನುಕ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಝಾ, ಶಾರುಖ್ ಖಾನ್, ಸ್ಯಾಮ್ ಕರ್ರಾನ್, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.
ಪಂಜಾಬ್ ಕಿಂಗ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.