IPL 2023: ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ಬುಧವಾರ, ಏಪ್ರಿಲ್ 5ರಂದು ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 8ನೇ ಪಂದ್ಯದಲ್ಲಿ ಕಳೆದ ಸೀಸನ್‌ನ ರನ್ನರ್-ಅಪ್ ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಗೆಲುವಿಗಾಗಿ ಸೆಣಸಾಡುತ್ತಿವೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಆದ್ದರಿಂದ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಈ ಪಂದ್ಯವು ಎರಡು ತಂಡಗಳ ನಡುವೆ ಹೆಚ್ಚಿನ ಸ್ಕೋರಿಂಗ್ ಆಟಕ್ಕೆ ಸಾಕ್ಷಿಯಾಗಲಿದ್ದು, ಪ್ರೇಕ್ಷಕರಿಗೆ ರೋಚಕ ಅನುಭವ ನೀಡುವ ಸಾಧ್ಯತೆ ಇದೆ. ರಾಜಸ್ಥಾನ ರಾಯಲ್ಸ್ ತಂಡದ ಕಡೆ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಅವರಂತಹ ಬಿಗ್ ಹಿಟ್ಟರ್‌ಗಳಿದ್ದರೆ, ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಮತ್ತು ಯುಜ್ವೇಂದ್ರ ಚಾಹಲ್ ದಾಳಿ ನಡೆಸಲಿದ್ದಾರೆ.
ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ತಂಡದ ಪರ ನಾಯಕ ಶಿಖರ್ ಧವನ್, ಭಾನುಕ ರಾಜಪಕ್ಸೆ, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರ್ರಾನ್ ಅವರಂತಹ ಆಟಗಾರರನ್ನು ಒಳಗೊಂಡಿದೆ.
ರಾಜಸ್ಥಾನ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 72 ರನ್‌ಗಳ ಅಮೋಘ ಗೆಲುವು ಸಾಧಿಸಿತ್ತು. ಇನ್ನು ಪಂಜಾಬ್ ಕಿಂಗ್ಸ್ ತಂಡ 2023ರ ಐಪಿಎಲ್ ಅಭಿಯಾನವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ ಗೆಲುವಿನೊಂದಿಗೆ ಆರಂಭಿಸಿತು.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ. Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಗ ಆಗಿ ವೀಕ್ಷಿಸಬಹುದು.
ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ
ರಾಜಸ್ಥಾನ ರಾಯಲ್ಸ್ ತಂಡ: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಭಾನುಕ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಝಾ, ಶಾರುಖ್ ಖಾನ್, ಸ್ಯಾಮ್ ಕರ್ರಾನ್, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.
ಪಂಜಾಬ್ ಕಿಂಗ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications