Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs RR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Rajasthan Royals vs Royal Challengers Bangalore dream team prediction

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ಮೇ 14ರ ಭಾನುವಾರ ಲೀಗ್ ಹಂತದ 60 ಹಾಗೂ 61 ನೇ ಪಂದ್ಯಗಳು ಜರುಗಲಿವೆ. ಮಧ್ಯಾಹ್ನ ನಡೆಯಲಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿದ್ದರೆ, ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇತ್ತಂಡಗಳ ನಡುವಿನ ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಎರಡೂ ತಂಡಗಳಿಗೂ ಸಹ ಅತಿಮುಖ್ಯದ್ದಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.

ಅತ್ತ್ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವುದರ ಜತೆಗೆ ಪ್ಲೇಆಫ್ ಹಾದಿಯನ್ನು ಸಹ ಸುಗಮ ಮಾಡಿಕೊಳ್ಳಲಿವೆ. ಹೀಗಾಗಿಯೇ ಎರಡೂ ತಂಡಗಳಿಗೂ ಸಹ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಹೀಗೆ ಮುಖ್ಯವಾಗಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಹೆಚ್ಚಾಗಿದ್ದು, ಯಾವ ತಂಡ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ ಎಂಬ ಚರ್ಚೆ ಆರಂಭವಾಗಿದೆ. ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್ ರಚಿಸುತ್ತಿದ್ದು, ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಹೆಚ್ಚು ಅಂಕಗಳನ್ನು ಗಳಿಸಬಹುದಾಗಿದೆ.

ಡ್ರೀಮ್ ಟೀಮ್ 1 :

ವಿಕೆಟ್ ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ (ಉಪನಾಯಕ), ಫಾಫ್ ಡು ಪ್ಲೆಸಿಸ್ (ನಾಯಕ), ಯಶಸ್ವಿ ಜೈಸ್ವಾಲ್

ಆಲ್ ರೌಂಡರ್‌ಗಳು - ರವಿ ಅಶ್ವಿನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ

ಬೌಲರ್‌ಗಳು - ಯುಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್

ಡ್ರೀಮ್ ಟೀಮ್ 2:

ವಿಕೆಟ್ ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಉಪನಾಯಕ)

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಯಶಸ್ವಿ ಜೈಸ್ವಾಲ್

ಆಲ್‌ರೌಂಡರ್‌ಗಳು - ರವಿ ಅಶ್ವಿನ್, ಗ್ಲೆನ್ ಮ್ಯಾಕ್ಸ್‌ವೆಲ್ (ನಾಯಕ), ವನಿಂದು ಹಸರಂಗ

ಬೌಲರ್‌ಗಳು - ಯುಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಟ್ರೆಂಟ್ ಬೌಲ್ಟ್

ಸಂಭಾವ್ಯ ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್ ಕುಮಾರ್, ಹರ್ಷಲ್ ಪಟೇಲ್, ಕೇದಾರ್ ಜಾಧವ್

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ( ನಾಯಕ ಹಾಗೂ ವಿಕೆಟ್ ಕೀಪರ್), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್

Story first published: Sunday, May 14, 2023, 14:43 [IST]
Other articles published on May 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+