RCB vs RR: ಈ ಪಂದ್ಯಕ್ಕೂ ಕೊಹ್ಲಿ ಕ್ಯಾಪ್ಟನ್ಸಿ; ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಏಪ್ರಿಲ್ 23) ಎರಡು ಪಂದ್ಯಗಳು ಜರುಗಲಿದ್ದು, ಸದ್ಯ ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯ ಟೂರ್ನಿಯ 32ನೇ ಪಂದ್ಯವಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದಿದ್ದು ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ಫಾಫ್ ಡು ಪ್ಲೆಸಿಸ್ ಕಳೆದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದರು. ಹೀಗಾಗಿ ಫಾಫ್ ಡು ಪ್ಲೆಸಿಸ್ ಬದಲಾಗಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು. ಅದೇ ರೀತಿ ಇಂದಿನ ಪಂದ್ಯದಲ್ಲಿಯೂ ಸಹ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಇಂದು ಫಾಫ್ ಡು ಪ್ಲೆಸಿಸ್ ತಂಡದಲ್ಲಿದ್ದು, ನಾಯಕತ್ವವನ್ನು ಕೊಹ್ಲಿಗೆ ಬಿಟ್ಟುಕೊಟ್ಟಿದ್ದಾರೆ. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಸಿರು ಜರ್ಸಿ ತೊಟ್ಟು ಆಡಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ವೇಯ್ನ್ ಪಾರ್ನೆಲ್ ಹೊರಗುಳಿದಿದ್ದು, ಡೇವಿಡ್ ವಿಲ್ಲೆ ಆಗಮಿಸಿದ್ದಾರೆ.
ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ವಿಜಯಕುಮಾರ್ ವೈಶಾಕ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಕೆಳಕಂಡಂತಿದೆ:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications