For Quick Alerts
ALLOW NOTIFICATIONS  
For Daily Alerts
 

RR vs SRH: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Rajasthan Royals vs Sunrisers Hyderabad dream team prediction and probable playing 11

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51 ಹಾಗೂ 52ನೇ ಪಂದ್ಯಗಳು ಇಂದು ( ಮೇ 7 ) ಆಯೋಜನೆಗೊಂಡಿವೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಲಿವೆ.

ಇನ್ನು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡ ಹಾಗೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ತಂಡದ ನಡುವಿನ ಸೆಣಸಾಟವಾಗಿದೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, 9 ಪಂದ್ಯಗಳನ್ನಾಡಿ ಕೇವಲ 3 ಪಂದ್ಯಗಳಲ್ಲಿ ಜಯ ಗಳಿಸಿ, ಉಳಿದ 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಕೇವಲ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಕೊನೆಯ ಸ್ಥಾನದಲ್ಲಿದೆ.

ಹೀಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು ಪ್ಲೇಆಫ್ ರೇಸ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯವನ್ನು ಗೆದ್ದು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭ ಮಾಡಿಕೊಳ್ಳುವ ತವಕದಲ್ಲಿದೆ. ಅತ್ತ ಟೂರ್ನಿಯಲ್ಲಿ ಹೀನಾಯವಾಗಿ ಸೋತು ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಗುಳಿದಿರುವ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಆಸೆಯನ್ನು ಉಳಿಸಿಕೊಳ್ಳಲಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಹೆಚ್ಚಿದೆ.

ಹೀಗೆ ಎರಡೂ ತಂಡಗಳಿಗೂ ಈ ಪಂದ್ಯ ಮುಖ್ಯದ್ದಾಗಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಶುರುವಾಗಿದೆ. ಅತ್ತ ಫ್ಯಾಂಟಸಿ ಕ್ರಿಕೆಟ್ ಆಡುವ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯದಲ್ಲಿ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂದು ಊಹಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದು, ಅಂತಹ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಹೆಚ್ಚು ಫ್ಯಾಂಟಸಿ ಅಂಕಗಳನ್ನು ಗಳಿಸಿ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಹೆಚ್ಚಿದೆ.

ಡ್ರೀಮ್ ಟೀಮ್ 1: ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ಹೆನ್ರಿಚ್ ಕ್ಲಾಸೆನ್

ಬ್ಯಾಟ್ಸ್‌ಮನ್‌ಗಳು - ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಯಶಸ್ವಿ ಜೈಸ್ವಾಲ್ (ನಾಯಕ)

ಆಲ್ ರೌಂಡರ್‌ಗಳು - ರವಿಚಂದ್ರನ್ ಅಶ್ವಿನ್, ಏಡೆನ್ ಮಾರ್ಕ್ರಾಮ್ (ಉಪನಾಯಕ), ಮಾರ್ಕೊ ಜಾನ್ಸೆನ್

ಬೌಲರ್‌ಗಳು - ಯುಜ್ವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್

ಡ್ರೀಮ್ ಟೀಮ್ 2: ಕೀಪರ್ - ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್

ಬ್ಯಾಟ್ಸ್‌ಮನ್‌ಗಳು - ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಯಶಸ್ವಿ ಜೈಸ್ವಾಲ್

ಆಲ್ ರೌಂಡರ್‌ಗಳು - ರವಿಚಂದ್ರನ್ ಅಶ್ವಿನ್, ಏಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್ (ಉಪನಾಯಕ)

ಬೌಲರ್‌ಗಳು - ಯುಜುವೇಂದ್ರ ಚಹಾಲ್, ಟ್ರೆಂಟ್ ಬೌಲ್ಟ್, ಮಯಾಂಕ್ ಮಾರ್ಕಂಡೆ

ಸಂಭಾವ್ಯ ಆಡುವ ಬಳಗ:
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ( ನಾಯಕ ಹಾಗೂ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್

ಸನ್ ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ರಾಹುಲ್ ತ್ರಿಪಾಠಿ

Story first published: Sunday, May 7, 2023, 17:57 [IST]
Other articles published on May 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+