Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs SRH: ಜೋ ರೂಟ್ ಐಪಿಎಲ್ ಪದಾರ್ಪಣೆ; ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Rajasthan Royals vs Sunrisers Hyderabad toss report, playing 11 and live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51 ಹಾಗೂ 52ನೇ ಪಂದ್ಯಗಳು ಇಂದು ( ಮೇ 7 ) ಆಯೋಜನೆಗೊಂಡಿವೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡುತ್ತಿವೆ.

ಇನ್ನು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಇದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ನಡುವಿನ ಸೆಣಸಾಟವಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದಾರೆ. ಈ ಪಂದ್ಯದ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪದಾರ್ಪಣೆ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಹ್ಯಾರಿ ಬ್ರೂಕ್ ಹೊರಬಿದ್ದಿದ್ದು, ಗ್ಲೆನ್ ಫಿಲಿಪ್ಸ್ ಕಣಕ್ಕಿಳಿದಿದ್ದಾರೆ.

ಆಡುವ ಬಳಗಗಳು:

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್ ( ವಿಕೆಟ್ ಕೀಪರ್ ), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್ ) , ಜೋ ರೂಟ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಮುರುಗನ್ ಅಶ್ವಿನ್, ಸಂದೀಪ್ ಶರ್ಮಾ, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್

ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ.

1
57107

Story first published: Sunday, May 7, 2023, 19:18 [IST]
Other articles published on May 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+