Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಆರ್‌ಸಿಬಿ ತಂಡಕ್ಕೆ ಈತನ ಅನುಪಸ್ಥಿತಿ ಖಂಡಿತ ಕಾಡುತ್ತಿದೆ; ಆಕಾಶ್ ಚೋಪ್ರಾ

ಸೋಮವಾರ, ಏಪ್ರಿಲ್ 10ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಮುಖಾಮುಖಿಯಾಗುತ್ತಿವೆ.

ಇದಕ್ಕೂ ಮುನ್ನ ಆರ್‌ಸಿಬಿ ತಂಡದ ಪ್ರಮುಖ ಬ್ಯಾಟರ್ ರಜತ್ ಪಾಟಿದಾರ್ ಹಿಮ್ಮಡಿ ಗಾಯದ ಕಾರಣ 2023ರ ಪಂದ್ಯಾವಳಿಯಿಂದ ಹೊರಬಿದ್ದರು. ಅವರ ಬದಲಾಗಿ ಕರ್ನಾಟಕದ ವೈಶಾಕ್ ವಿಜಯಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ಬಲಿಷ್ಠ ತಂಡವನ್ನು ಕಣಕ್ಕಿಳಿಯಲು ಸಜ್ಜಾಗಿದೆ.

IPL 2023: Rajat Patidars Absence Definitely Setback For RCB Team Says Aakash Chopra

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಆರ್‌ಸಿಬಿ ತಂಡದಲ್ಲಿ ರಜತ್ ಪಾಟಿದಾರ್ ಅನುಪಸ್ಥಿತಿ ಕಾಡುತ್ತಿದೆ ಎಂದರು.

ತನ್ನ ಯುಟ್ಯೂಬ್ ಚಾನೆಲ್‌ ಆಕಾಶವಾಣಿಯಲ್ಲಿ ಮಾತನಾಡಿದ ಅಕಾಶ್ ಚೋಪ್ರಾ, "ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಇಬ್ಬರೂ ಉತ್ತಮ ಫಾರ್ಮ್‌ನಲ್ಲಿ ಕಾಣುತ್ತಿದ್ದಾರೆ. ಆದರೆ, ಯುವ ಬ್ಯಾಟರ್ ರಜತ್ ಪಾಟಿದಾರ್ ಅನುಪಸ್ಥಿತಿಯನ್ನು ಆರ್‌ಸಿಬಿ ಅನುಭವಿಸುತ್ತಿದೆ," ಎಂದು ಹೇಳಿದರು.

Irfan Pathan On Virat Kohli: 2023ರ ಐಪಿಎಲ್‌ಗಾಗಿ ವಿರಾಟ್ ಕೊಹ್ಲಿಗೆ ಈ ಸಲಹೆ ನೀಡಿದ ಇರ್ಫಾನ್ ಪಠಾಣ್

ಆರ್‌ಸಿಬಿ ಆರಂಭಿಕ ಬ್ಯಾಟ್ಸ್‌ಮನ್‌ಗಳು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಇವರೇ ಆಡಲು ಸಾಧ್ಯವಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧದ ತನ್ನ ಆರ್‌ಸಿಬಿ ಆರಂಭಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆಯನ್ನು ಸೋಲಿಸಿತು. ಆದರೆ, ನಂತರದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 81 ರನ್‌ಗಳ ಹೀನಾಯವಾಗಿ ಸೋಲು ಅನುಭವಿಸಬೇಕಾಯಿತು.

IPL 2023: Rajat Patidars Absence Definitely Setback For RCB Team Says Aakash Chopra

ಆರ್‌ಸಿಬಿ ತಂಡದ ಬೌಲಿಂಗ್ ಆಯ್ಕೆಗಳ ಕುರಿತು ಮಾತನಾಡಿದ ಆಕಾಶ್ ಚೋಪ್ರಾ, ಶ್ರೀಲಂಕಾ ತಂಡದ ಸ್ಪಿನ್ನರ್ ವನಿಂದು ಹಸರಂಗ ಅವರು ಆಡುವ 11ರ ಬಳಗದಲ್ಲಿ ಆಯ್ಕೆಯಾಗಬಹುದು ಮತ್ತು ಡೇವಿಡ್ ವಿಲ್ಲಿ ಅವರ ಸ್ಥಾನವನ್ನು ಬದಲಾಯಿಸಬಹುದು ಎಂದು ಹೇಳಿದರು.

"ಹಾಗಾದರೆ ಈ ಪಂದ್ಯದಲ್ಲಿ ಮೈಕಲ್ ಬ್ರೇಸ್‌ವೆಲ್ ಅವರನ್ನು ಬಿಟ್ಟು ವನಿಂದು ಹಸರಂಗರನ್ನು ಆಡಿಸಬಹುದೇ?" ಎಂಬ ಪ್ರಶ್ನೆಗೆ, "ಅದು ಕೂಡ ಆಯ್ಕೆಯಾಗಿದೆ. ಆದರೆ ಎದುರಾಳಿ ತಂಡದಲ್ಲಿ ಸಾಕಷ್ಟು ಎಡಗೈ ಆಟಗಾರರಿದ್ದಾರೆ. ಆದ್ದರಿಂದ ಆರ್‌ಸಿಬಿ ಮೈಕಲ್ ಬ್ರೆಸ್‌ವೆಲ್ ಅವರನ್ನು ಆಡಿಸಬಹುದು,'' ಎಂದರು.

IPL 2023: Rajat Patidars Absence Definitely Setback For RCB Team Says Aakash Chopra

ಆರ್‌ಸಿಬಿ vs ಎಲ್ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್ / ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬದೊನಿ, ರೊಮಾರಿಯೊ ಶೆಫರ್ಡ್ / ಮಾರ್ಕ್ ವುಡ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಜಯದೇವ್ ಉನಾದ್ಕಟ್.

Story first published: Monday, April 10, 2023, 17:42 [IST]
Other articles published on Apr 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+