For Quick Alerts
ALLOW NOTIFICATIONS  
For Daily Alerts
 

IPL 2023 RCB: ತವರಿನ ಅಂಗಳದಲ್ಲಿ ಆರ್‌ಸಿಬಿ ಸಾಧನೆ ಬಗ್ಗೆ ಆಕಾಶ್ ಚೋಪ್ರ ಟೀಕೆ!

ಐಪಿಎಲ್ 16ನೇ ಆವೃತ್ತಿಯಲ್ಲಿ ಎಲ್ಲಾ ತಂಡಗಳು ಕೂಡ ತವರಿನಲ್ಲಿ ಆಡುವ ಅವಕಾಶ ಪಡೆದುಕೊಂಡಿದೆ. ಕಳೆದ ಮೂರು ಆವೃತ್ತಿಗಳಲ್ಲಿ ಈ ಅವಕಾಶ ಇರಲಿಲ್ಲವಾದ ಕಾರಣ ಅಭಿಮಾನಿಗಳು ಮತ್ತೆ ಹೋಮ್ ಹಾಗೂ ಅವೇ ಮಾದರಿಯ ಪಂದ್ಯಗಳು ಮರಳಿರುವುದಕ್ಕೆ ಸಂತಸಗೊಂಡಿದ್ದಾರೆ. ಎಲ್ಲಾ ತಂಡಗಳು ತವರಿನ ಅಂಗಳದ ಲಾಭವನ್ನು ಪಡೆದು ಹೆಚ್ಚಿನ ಪಂದ್ಯಗಳನ್ನು ಗೆಲ್ಲುವ ಲೆಕ್ಕಾಚಾರವನ್ನು ಕೂಡ ಮಾಡಿಕೊಂಡಿರುತ್ತವೆ. ಆದರೆ ಆರ್‌ಸಿಬಿ ತಂಡದ ತವರಿನ ದಾಖಲೆ ಮಾತ್ರ ಅಭಿಮಾನಿಗಳಿಗೆ ಖುಷಿ ನೀಡುವಂತಿಲ್ಲ. ಈ ಬಗ್ಗೆ ಕಾಮೆಂಟೇಟರ್ ಆಕಾಶ್ ಚೋಪ್ರ ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಆರ್‌ಸಿಬಿ ತಂಡ ತವರಿನ ಅಂಗಳದ ಕಳಪೆ ದಾಖಲೆಯ ಬಗ್ಗೆ ತಂಡವನ್ನು ಟೀಕಿಸಿದ್ದಾರೆ. ಆರ್‌ಸಿಬಿ ತಂಡ ಈ ವರ್ಷದ ಆವೃತ್ತುಯ ಮೊದಲ ಪಂದ್ಯವನ್ನು ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದ್ದು ಇದಕ್ಕೂ ಮುನ್ನ ಆಕಾಶ್ ಚೋಪ್ರ ಈ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದ ಟೀಕೆ ವ್ಯಕ್ತಪಡಿಸಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅವರು ಈ ಅನಿಸಿಕೆ ಹಂಚಿಕೊಂಡಿದ್ದಾರೆ.

IPL 2023 RCB: Aakash Chopra criticized RCB for bad home record at Chinnaswamy stadium

"ಆರ್‌ಸಿಬಿಯ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣ. ಆದರೆ ಈ ಮೈದಾನದಲ್ಲಿ ಆರ್‌ಸಿಬಿ ತಂಡದ ದಾಖಲೆ ಬಹಳ ಬಹಳ ಕಳಪೆಯಾಗಿದೆ. ಇದು ಒಟ್ಟಾರೆಯಾಗಿ ಎರಡನೇ ಕಳಪೆ ಸಾಧನೆಯಾಗಿದೆ. ಮೊದಲ ಸ್ಥಾನದಲ್ಲಿ ಡೆಲ್ಲಿ ತಂಡ ಇದ್ದು ಅದಕ್ಕಿಂತ ಬಹಳ ಸಣ್ಣ ಅಂತರದಲ್ಲಿ ಆರ್‌ಸಿಬಿ ಮುಂದಿದೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಗಿರುವ ಆಕಾಶ್ ಚೋಪ್ರ.

ಇನ್ನು ಈ ಸಂದರ್ಭದಲ್ಲಿ ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್‌ನಲ್ಲೊ ಹಿನ್ನಡೆ ಅನುಭವಿಸಬಹುದಾದ ವಿಭಾಗವನ್ನು ಉಲ್ಲೇಖಿಸಿದ್ದಾರೆ. ಬೌಲಿಂಗ್‌ನಲ್ಲಿ ಜೋಶ್ ಹೇಜಲ್‌ವುಡ್ ಹಾಗೂ ಹಸರಂಗ ಆರಂಬಿಕ ಕೆಲ ಪಂದ್ಯಗಳಿಗೆ ಅಲಭ್ಯವಾಗುತ್ತಿರುವ ಕಾರಣದಿಂದಾಗಿ ತಂಡ ಹಿನ್ನಡೆ ಅನುಭವಿಸಲಿದೆ ಎಂದಿದ್ದಾರೆ. ಹೇಜಲ್‌ವುಡ್ ಗಾಯದ ಕಾರಣದಿಂದಾಗಿ ಕೆಲ ಪಂದ್ಯಗಳಿಗೆ ಅಲಭ್ಯವಾಗಿದ್ದರೆ ಹಸರಂಗ ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಆಡುತ್ತಿರುವ ಕಾರಣದಿಂದಾಗಿ ತಡವಾಗಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರ, ರೋಹಿತ್ ಶರ್ಮಾ ಪಡೆ ಈ ಬಾರಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದಿದ್ದಾರೆ. ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅವರನ್ನು ಆರಂಭಿಕನಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಆಕಾಶ್ ಚೋಪ್ರ ಈ ನಿರ್ಧಾರವನ್ನು ತೆಗೆದುಕೊಂಡರೆ ಆತನಿಂದ ಅತ್ಯುತ್ತಮ ಪ್ರದರ್ಶನವನ್ನು ಪಡೆಯಬಹುದು ಎಂದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ಕ್ಯಾಮರೂನ್ ಗ್ರೀನ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲು ಹರಾಜಿನಲ್ಲಿ 17.5 ಕೋಟಿ ವ್ಯಯಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್

Story first published: Sunday, April 2, 2023, 18:10 [IST]
Other articles published on Apr 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+