
ಇಂದು ( ಮೇ 8 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಲೀಗ್ ಹಂತದ 53ನೇ ಪಂದ್ಯ ಜರುಗಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 180 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿದ್ದು 5 ವಿಕೆಟ್‌ಗಳ ಗೆಲುವನ್ನು ಕಂಡಿದೆ.
ಈ ಗೆಲುವಿನೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಕೊಂಡಿದೆ. ಹೌದು, ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ಪ್ರವೇಶಿಸುವುದು ಅನುಮಾನ ಎನ್ನುತ್ತಿದ್ದವರಿಗೆ ಈ ಪಂದ್ಯದ ಮೂಲಕ ತಂಡ ಉತ್ತರ ಕೊಟ್ಟಿದ್ದು, ಎಂಟನೇ ಸ್ಥಾನದಲ್ಲಿದ್ದ ಕೆಕೆಆರ್ ಒಮ್ಮೆಲೇ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಅಲ್ಲದೇ ಐದನೇ ಸ್ಥಾನದಲ್ಲಿದ್ದರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನಕ್ಕೆ ಹಾಗೂ ಆರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಎಂಟನೇ ಸ್ಥಾನಕ್ಕೆ ಕುಸಿದಿದೆ.
ಹೀಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದ ನಂತರ ಅಂಕಪಟ್ಟಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು, ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.