For Quick Alerts
ALLOW NOTIFICATIONS  
For Daily Alerts
 

RCB vs RR: 59 ರನ್‌ಗಳಿಗೆ ರಾಜಸ್ಥಾನ್ ಆಲ್‌ಔಟ್; ಪ್ರಚಂಡ ಗೆಲುವು ಸಾಧಿಸಿ ಪ್ಲೇಆಫ್ ಆಸೆ ಉಳಿಸಿಕೊಂಡ ಆರ್‌ಸಿಬಿ

IPL 2023: RCB beats Rajasthan Royals by 112 runs & climbed to 5th spot in points table

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ಮೇ 14ರ ಭಾನುವಾರ ಡಬಲ್ ಹೆಡರ್ ಪಂದ್ಯಗಳು ಆಯೋಜನೆಯಾಗಿವೆ.

ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಿದ್ದು, ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಫಾಫ್ ಡು ಪ್ಲೆಸಿಸ್ ಕೈ ಹಿಡಿದ ಕಾರಣ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 172 ರನ್‌ಗಳ ಗುರಿಯನ್ನು ನೀಡಿತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ದಾಳಿಗೆ ನಲುಗಿ 10.3 ಓವರ್‌ಗಳಲ್ಲಿ ಕೇವಲ 59 ರನ್‌ಗಳಿಗೆ ಆಲ್ಔಟ್ ಆಗಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 112 ರನ್‌ಗಳ ಬೃಹತ್ ಜಯವನ್ನು ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿಕೆ ಕಂಡಿದ್ದು ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ವಿರಾಟ್ ಕೊಹ್ಲಿ 19 ಎಸೆತಗಳಲ್ಲಿ 18 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 44 ಎಸೆತಗಳಲ್ಲಿ 55 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು.

ಹೀಗೆ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿದರೆ ಕೊನೆಯಲ್ಲಿ ಬಂದ ಅನುಜ್ ರಾವತ್ 11 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 29 ರನ್ ಚಚ್ಚಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ಮಹಿಪಾಲ್ ಲೊಮ್ರೊರ್ 2 ಎಸೆತಗಳಲ್ಲಿ 1 ರನ್, ದಿನೇಶ್ ಕಾರ್ತಿಕ್ 2 ಎಸೆತಗಳಲ್ಲಿ ಡಕ್ಔಟ್ ಹಾಗೂ ಮೈಕೆಲ್ ಬ್ರೇಸ್‌ವೆಲ್ 9 ಎಸೆತಗಳಲ್ಲಿ ಅಜೇಯ 9 ರನ್ ಕಲೆಹಾಕಿದರು.

ರಾಜಸ್ಥಾನ್ ರಾಯಲ್ಸ್ ತಂಡದ ಪರ ಕೆಎಂ ಆಸಿಫ್ ಎರಡು ವಿಕೆಟ್ ಪಡೆದರೆ ಆಡಂ ಜಂಪಾ ಹಾಗೂ ಸಂದೀಪ್ ಶರ್ಮಾ ಒಂದು ವಿಕೆಟ್ ಪಡೆದರು.

ರಾಜಸ್ಥಾನ್ ರಾಯಲ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ ಪೈಪೋಟಿಯುತ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ಅಕ್ಷರಶಃ ಮಕಾಡೆ ಮಲಗಿತು. ತಂಡದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಕಣಕ್ಕಿಳಿದರು. ಜೈಸ್ವಾಲ್ ಸಿರಾಜ್ ಎಸೆದ ಮೊದಲ ಓವರ್‌ನ ಎರಡನೇ ಎಸೆತಕ್ಕೆ ಕೊಹ್ಲಿಗೆ ಕ್ಯಾಚ್ ನೀಡಿ ಡಕ್ಔಟ್ ಆದರೆ, ಬಟ್ಲರ್ ಪಾರ್ನೆಲ್ ಎಸೆದ ಎರಡನೇ ಓವರ್‌ನ ಎರಡನೇ ಎಸೆತದಲ್ಲಿ ಸಿರಾಜ್‌ಗೆ ಕ್ಯಾಚ್ ನೀಡಿ ಡಕ್ಔಟ್ ಆದರು.

ಹೀಗೆ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ ಮುಗಿಯುವ ತನಕ ಎಲ್ಲಿಯೂ ಸುಧಾರಿಸಿಕೊಳ್ಳಲೇ ಇಲ್ಲ. ಪವರ್‌ಪ್ಲೇ ಒಳಗೆಯೇ ತನ್ನ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡದ ಪರ ಶಿಮ್ರಾನ್ ಹೆಟ್ಮಾಯೆರ್ ಕೆಲ ಕಾಲ ಬಿರುಸಿನ ಬ್ಯಾಟಿಂಗ್ ನಡೆಸಿದರಾದರೂ ಇತರೆ ಆಟಗಾರರ ಸಹಕಾರ ದೊರಕದ ಕಾರಣ ತಂಡ ಎಲ್ಲಿಯೂ ಸುಧಾರಿಸಿಕೊಳ್ಳಲಿಲ್ಲ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಸಂಜು ಸ್ಯಾಮ್ಸನ್ 4 ರನ್, ಜೋ ರೂಟ್ 10, ದೇವದತ್ ಪಡಿಕ್ಕಲ್ 4, ಧ್ರುವ್ ಜುರೆಲ್ 1, ರವಿಚಂದ್ರನ್ ಅಶ್ವಿನ್ ಡಕ್ ಔಟ್, ಆಡಂ ಜಂಪಾ 2, ಕೆಎಂ ಆಸಿಫ್ ಡಕ್ಔಟ್ ಆದರೆ ಸಂದೀಪ್ ಶರ್ಮಾ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದುಕೊಂಡರು. ಮಧ್ಯದಲ್ಲಿ ಅಬ್ಬರಿಸಿದ ಶಿಮ್ರಾನ್ ಹೆಟ್ಮಾಯೆರ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 35 ರನ್ ಚಚ್ಚಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವೇಯ್ನ್ ಪಾರ್ನೆಲ್ 3 ವಿಕೆಟ್ ಪಡೆದರೆ, ಕರ್ಣ್ ಶರ್ಮಾ ಹಾಗೂ ಮೈಕೆಲ್ ಬ್ರೇಸ್‌ವೆಲ್ ತಲಾ ಎರಡು ವಿಕೆಟ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಗಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್ ಹಾಗೂ ನಾಯಕ), ಜೋ ರೂಟ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಹಾಲ್

Story first published: Sunday, May 14, 2023, 18:31 [IST]
Other articles published on May 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+