For Quick Alerts
ALLOW NOTIFICATIONS  
For Daily Alerts
 

GT vs RCB: ಶತಕ ಬಾರಿಸಿ ಆರ್‌ಸಿಬಿ ಪ್ಲೇಆಫ್ ಆಸೆಗೆ ತಣ್ಣೀರೆರಚಿದ ಗಿಲ್; ಬೆಂಗಳೂರು ಮನೆಗೆ!

IPL 2023: RCB lost the playoff chance as Gujarat Titans beat them in 70th match

ನಿನ್ನೆ ( ಮೇ 21 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯ ಆಯೋಜನೆಗೊಂಡಿತ್ತು. ಮಳೆಯ ಕಾರಣದಿಂದಾಗಿ ತಡವಾಗಿ ಆರಂಭಗೊಂಡಿದ್ದ ಈ ಪಂದ್ಯ ಸದ್ಯ ಅಂತ್ಯ ಕಂಡಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಗುಜರಾತ್ ಟೈಟನ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ.

ತೀವ್ರ ಮಳೆಯ ಕಾರಣದಿಂದಾಗಿ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ಹಾಗೂ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ ವಿಕೆಟ್ 5 ನಷ್ಟಕ್ಕೆ 197 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ ತಂಡಕ್ಕೆ ಗೆಲ್ಲಲು 198 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾದ ಗುಜರಾತ್ ಟೈಟನ್ಸ್ ಶುಬ್‌ಮನ್ ಗಿಲ್ ಭರ್ಜರಿ ಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಅವಕಾಶದಿಂದ ವಂಚಿತಗೊಂಡಿದ್ದು, ಮುಂಬೈ ಇಂಡಿಯನ್ಸ್ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ಫಾಫ್ ಡು ಪ್ಲೆಸಿಸ್ 19 ಎಸೆತಗಳಲ್ಲಿ 28 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ಕೊನೆಯ ಎಸೆತದವರೆಗೂ ನೆಲಕಚ್ಚಿ ನಿಂತು ಅಬ್ಬರದ ಶತಕ ಬಾರಿಸಿದರು. 61 ಎಸೆತಗಳನ್ನು ಎದುರಿಸಿದ ಕೊಹ್ಲಿ 13 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 101 ರನ್ ಕಲೆಹಾಕಿದರು.

ಈ ಮೂಲಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ 5 ಎಸೆತಗಳಲ್ಲಿ 11 ರನ್, ಮಹಿಪಾಲ್ ಲೊಮ್ರೊರ್ 3 ಎಸೆತಗಳಲ್ಲಿ 1 ರನ್, ಮೈಕೆಲ್ ಬ್ರೇಸ್‌ವೆಲ್ 16 ಎಸೆತಗಳಲ್ಲಿ 26, ದಿನೇಶ್ ಕಾರ್ತಿಕ್ ಗೋಲ್ಡನ್ ಡಕ್ಔಟ್ ಹಾಗೂ ಅನುಜ್ ರಾವತ್ 15 ಎಸೆತಗಳಲ್ಲಿ ಅಜೇಯ 23 ರನ್ ದಾಖಲಿಸಿದರು.

ಗುಜರಾತ್ ಟೈಟನ್ಸ್ ಪರ ನೂರ್ ಅಹ್ಮದ್ 2 ವಿಕೆಟ್, ರಶೀದ್ ಖಾನ್, ಯಶ್ ದಯಾಳ್ ಹಾಗೂ ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಪಡೆದರು.

ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ಗುಜರಾತ್ ಟೈಟನ್ಸ್ ಪರ ವೃದ್ಧಿಮಾನ್ ಸಹಾ ಹಾಗೂ ಶುಬ್‌ಮನ್ ಗಿಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಸಹಾ 12 ರನ್ ಗಳಿಸಿ ಔಟ್ ಆದರೆ, ಶುಬ್‌ಮನ್ ಗಿಲ್ ಕೊನೆಯವರೆಗೂ ಅಬ್ಬರದ ಆಟವನ್ನಾಡಿ 52 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 104 ರನ್ ಚಚ್ಚಿ ಗೆಲುವಿನ ರೂವಾರಿಯಾದರು. ಇನ್ನುಳಿದಂತೆ ಸಹಾ ವಿಕೆಟ್ ಉರುಳಿದ ಬೆನ್ನಲ್ಲೇ ಕಣಕ್ಕಿಳಿದ ವಿಜಯ್ ಶಂಕರ್ 35 ಎಸೆತಗಳಲ್ಲಿ 53 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ದಾಸನ್ ಶನಕ ಡಕ್ ಔಟ್ ಆದರೆ, ಡೇವಿಡ್ ಮಿಲ್ಲರ್ 6 ರನ್ ಗಳಿಸಿ ಔಟ್ ಆದರು. ರಾಹುಲ್ ತೆವಾಟಿಯಾ ಅಜೇಯ 4 ರನ್ ಗಳಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್‌ಗಳು ಪಂದ್ಯದಲ್ಲಿ ಎಡವಿದರು. ಸಹಾ ವಿಕೆಟ್ ತೆಗೆದ ಬಳಿಕ ಒಂದಾದ ವಿಜಯ್ ಶಂಕರ್ ಹಾಗೂ ಶುಬ್‌ಮನ್ ಗಿಲ್ ವಿಕೆಟ್ ತೆಗೆಯಲಾಗದೇ ಪರದಾಡಿದರು. ಹೆಚ್ಚುವರಿ ರನ್ ನೀಡಿಯೂ ಸಹ ಗುಜರಾತ್ ತಂಡಕ್ಕೆ ಉಚಿತ ರನ್‌ಗಳ ಉಡುಗೊರೆ ನೀಡಿದರು.

ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರೆ, ವಿಜಯ್‌ಕುಮಾರ್ ವೈಶಾಖ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವಿಜಯ್‌ಕುಮಾರ್ ವೈಶಾಕ್

ಗುಜರಾತ್ ಟೈಟನ್ಸ್: ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಯಶ್ ದಯಾಳ್

Story first published: Monday, May 22, 2023, 0:22 [IST]
Other articles published on May 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+