For Quick Alerts
ALLOW NOTIFICATIONS  
For Daily Alerts
 

IPL 2023: ಸನ್‌ರೈಸರ್ಸ್ ಸೋಲಿಸಿ ಅಂಕಪಟ್ಟಿಯಲ್ಲಿ ಏರಿಕೆ ಕಂಡ ಆರ್‌ಸಿಬಿ; ಕುಸಿದ ಮುಂಬೈ

IPL 2023: RCB moved to 4th spot in points table after beating SRH and MI slipped to 5th spot

ಇಂದು ( ಮೇ 18 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ ರೈಸರ್ಸ್ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದೆ ಹಾಗೂ ಪ್ಲೇಆಫ್‌ಗೆ ಸಮೀಪಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಹೆನ್ರಿಚ್ ಕ್ಲಾಸೆನ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 187 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಅಬ್ಬರದ ಶತಕ ಹಾಗೂ ಫಾಫ್ ಡು ಪ್ಲೆಸಿಸ್ ಸ್ಪೋಟಕ ಆಟದ ನೆರವಿನಿಂದ 19.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡಿದ್ದರೆ ನಾಲ್ಕನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಐದನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಈ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡ ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Thursday, May 18, 2023, 23:45 [IST]
Other articles published on May 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+