For Quick Alerts
ALLOW NOTIFICATIONS  
For Daily Alerts
 

IPL 2023: ಆರ್‌ಸಿಬಿ ತಂಡದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? ಏನಿದೆ ಸವಾಲು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಬ್ಬರದ ಆರಂಭವನ್ನು ಪಡೆದುಕೊಂಡರೂ ಎರಡನೇ ಪಂದ್ಯದಲ್ಲಿ ಮುಗ್ಗರಿಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದ್ದ ಆರ್‌ಸಿಬಿ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಈ ಸೋಲು ಆರ್‌ಸಿಬಿ ಅಂಕ ಪಟ್ಟಿಯ ಮೇಲೆಯೂ ಭಾರೀ ಪರಿಣಾಮ ಬೀರಿದ್ದು 3ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ.

ಇದೀಗ ಆರ್‌ಸಿಬಿ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವುದನ್ನು ಆರ್‌ಸಿಬಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಹೀನಾಯ ಸೋಲಿನಿಂದ ಕಂಗೆಟ್ಟಿರುವ ತಂಡ ಮುಂದಿನ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ. ಮಾಡಿರುವ ತಪ್ಪನ್ನು ಯಾವ ರೀತಿ ತಿದ್ದಿಕೊಳ್ಳಲಿದೆ ಎಂಬುದು ಸದ್ಯಕ್ಕಿರುವ ಪ್ರಶ್ನೆ. ಹಾಗಿದ್ದರೆ ಆರ್‌ಸಿಬಿ ತಂಡದ ಮುಂದಿನ ಎದುರಾಳಿ ಯಾರು? ಎಲ್ಲಿ, ಯಾವಾಗ ನಡೆಯಲಿದೆ ಪಂದ್ಯ. ಮುಂದೆ ಓದಿ..

IPL 2023: RCB next match against Lucknow super giants, when? where? full details

ಆರ್‌ಸಿಬಿಗೆ ಮುಂದಿನ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್: ಅಂದ ಹಾಗೆ ಆರ್‌ಸಿಬಿ ತಂಡಕ್ಕೆ ಮುಂದಿನ ಎದುರಾಳಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದ್ದು ಮುಂದಿನ ಸೋಮವಾರ ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಆರ್‌ಸಿಬಿ ತವರಿನಲ್ಲಿಯೇ ಈ ಪಂದ್ಯ ಆಯೋಜನೆಯಾಗಲಿರುವ ಕಾರಣ ಕುತೂಹಲ ಹೆಚ್ಚಾಗಿದೆ.

ಬಲಿಷ್ಠ ಆಟಗಾರರನ್ನು ಹೊಂದಿದೆ ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಆವೃತ್ತಿಯಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದು ಮೊದಲ ಆವೃತ್ತಿಯಲ್ಲಿ ಗಮನಾರ್ಹ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಎಲ್‌ಎಸ್‌ಜಿ ಪ್ರಥಮ ಪ್ರಯತ್ನದಲ್ಲಿ ಪ್ಲೇಆಫ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಆವೃತ್ತಿಯಲ್ಲಿಯೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೆಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದ್ದು ಹಲವು ಸ್ಟಾರ್ ಆಟಗಾರರನ್ನು ಹೊಂದಿದೆ.

ಕ್ವಿಂಟನ್ ಡಿಕಾಕ್ ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯವಾಗಿದ್ದ ಕಾರಣ ಆರಂಭಿಕನಾಗಿ ಕಣಕ್ಕಿಳಿದಿದ್ದ ಕೇಲ್ ಮೇಯರ್ಸ್ ಸ್ಪೋಟಕ ಪ್ರದರ್ಶನದ ಮೂಲಕ ಅಬ್ಬರಿಸಿದ್ದು ಎರಡು ಪಂದ್ಯಗಳಲ್ಲಿಯೂ ಅರ್ಧ ಶತಕ ಸಿಡಿಸಿದ್ದಾರೆ. ಈ ಮಧ್ಯೆ ಕ್ವಿಂಟನ್ ಡಿಕಾಕ್ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದು ಮತ್ತಷ್ಟು ಬಲ ಬಂದಿದೆ. ಬೌಲಿಂಗ್‌ನಲ್ಲಿ ಮಾರ್ಕ್ ವುಡ್ ಅಮೋಘ ಪ್ರದರ್ಶನ ನೀಡುತ್ತಿದ್ದು ತಂಡಕ್ಕೆ ಭರವಸೆ ಮೂಡಿಸಿದ್ದಾರೆ.

ರಾಹುಲ್, ಕೆ ಗೌತಮ್ ಆಡಿ ಬೆಳೆದ ಅಂಗಳ: ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಕೃಷ್ಣಪ್ಪ ಗೌತಮ್ ಇಬ್ಬರು ಕೂಡ ಕರ್ನಾಟಕದವರಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಈ ಇಬ್ಬರಿಗೂ ತವರಿನ ಕ್ರೀಡಾಂಗಣವಾಗಿದೆ. ಹೀಗಾಗಿ ಇಲ್ಲಿನ ಪ್ರತಿಯೊಂದು ಸೂಕ್ಷ್ಮ ಅಂಶಗಳನ್ನು ಕೂಡ ಈ ಇಬ್ಬರು ಆಟಗಾರರು ಚೆನ್ನಾಗಿ ಬಲ್ಲವರಾಗಿದ್ದು ಇದರ ಲಾಭವನ್ನು ಆರ್‌ಸಿಬಿ ವಿರುದ್ಧ ಬಳಸಿಕೊಳ್ಳಲಿದ್ದಾರೆ. ಇದು ಆರ್‌ಸಿಬಿ ತಂಡಕ್ಕೆ ಸವಾಲಾಗಲಿದೆ.

ಮೊದಲ ಪಂದ್ಯದಲ್ಲಿ ಗೆಲುವು ಮತ್ತೊಂದು ಸೋಲು: ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್‌ಸಿಬಿ ಎರಡು ತಂಡಗಳು ಕೂಡ ಆರಂಭಿಕ ಪಂದ್ಯವನ್ನು ಭರ್ಜರಿಯಾಗಿ ಗೆದ್ದು ಬೀಗಿದೆ. ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿದ್ದರೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಆದರೆ ಎರಡನೇ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿದ್ದು ಆ ಪಂದ್ಯದಲ್ಲಿ 12 ರನ್‌ಗಳ ಸೋಲು ಕಂಡಿದೆ.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

Story first published: Friday, April 7, 2023, 17:55 [IST]
Other articles published on Apr 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+