
ಇಂದು ( ಮೇ 6 ) ಇಂಡಿಯನ್ ಪ್ರೀಮಿಯರ್ ಲೀಗ್‌ನ ಎರಡು ಪಂದ್ಯಗಳು ಜರುಗಿವೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಕಂಡಿದ್ದು, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಟೂರ್ನಿಯ 50ನೇ ಲೀಗ್ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದರು. 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 182 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಫಿಲಿಪ್ ಸಾಲ್ಟ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 16.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿ 7 ವಿಕೆಟ್‌ಗಳ ಗೆಲುವನ್ನು ಕಂಡಿತು.
ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯವಾಗಿ ಸೋತರೂ ಸಹ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ ಹಾಗೂ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶದ ಹಾದಿ ಸುಗಮವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸದ್ಯ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಪಂದ್ಯ ಮುಗಿದ ಬಳಿಕ ಅಂಕಪಟ್ಟಿ ಈ ಕೆಳಕಂಡಂತಿದೆ..
1. 10 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.