For Quick Alerts
ALLOW NOTIFICATIONS  
For Daily Alerts
 

IPL 2023: ಅಂಕಪಟ್ಟಿಯಲ್ಲಿ ಕುಸಿದ ಆರ್‌ಸಿಬಿ; ಡುಪ್ಲೆಸಿಸ್, ಸಿರಾಜ್ ಕೈತಪ್ಪಿದ ಆರೆಂಜ್ & ಪರ್ಪಲ್ ಕ್ಯಾಪ್!

IPL 2023: RCB slipped in points table and Faf Du Plessis lost orange cap after MI vs RR match

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ನಿನ್ನೆ ( ಏಪ್ರಿಲ್ 30 ) ಎರಡು ಪಂದ್ಯಗಳು ಜರುಗಿದವು. ಮಧ್ಯಾಹ್ನ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು ಹಾಗೂ ರಾತ್ರಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 6 ವಿಕೆಟ್‌ಗಳ ಗೆಲುವನ್ನು ಕಂಡಿತು.

ಈ ಗೆಲುವುಗಳ ಮೂಲಕ ಪಂಜಾಬ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡರೆ, ಮುಂಬೈ ಇಂಡಿಯನ್ಸ್ ತಂಡ ಒಂಬತ್ತನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ಏರಿಕೆ ಕಂಡಿತು. ಈ ಬದಲಾವಣೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಸ್ಥಾನ ಕುಸಿತ ಕಂಡಿದೆ. ಅಲ್ಲದೇ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿ ಅಬ್ಬರಿಸಿದ ಕಾರಣ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು.

ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತುಷಾರ್ ದೇಶಪಾಂಡೆ ಅತಿಹೆಚ್ಚು ವಿಕೆಟ್ ಪಡೆದುಕೊಂಡ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ತಂಡದ ಆಟಗಾರ ಫಾಫ್ ಡು ಪ್ಲೆಸಿಸ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಕುಸಿತ ಕಂಡಿದ್ದಾರೆ. ಏಪ್ರಿಲ್ 30ರ ಪಂದ್ಯಗಳ ಮುಕ್ತಾಯದ ಬಳಿಕ ಅಂಕಪಟ್ಟಿ ಹೇಗಿದೆ ಹಾಗೂ ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಇರುವ ಟಾಪ್ 3 ಆಟಗಾರರು ಯಾರು ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 8 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 8 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಟಾಪ್ 3 ಪಟ್ಟಿ:

1. ಯಶಸ್ವಿ ಜೈಸ್ವಾಲ್ ( ರಾಜಸ್ಥಾನ್ ರಾಯಲ್ಸ್ ) - 428 ರನ್ ( 9 ಪಂದ್ಯಗಳು)
2. ಫಾಫ್ ಡು ಪ್ಲೆಸಿಸ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು ) - 422 ರನ್ ( 8 ಪಂದ್ಯಗಳು )
3. ಡಿವಾನ್ ಕಾನ್ವೆ ( ಚೆನ್ನೈ ಸೂಪರ್ ಕಿಂಗ್ಸ್ ) - 414 ರನ್ ( 9 ಪಂದ್ಯಗಳು )

ಪರ್ಪಲ್ ಕ್ಯಾಪ್ ಟಾಪ್ 3 ಪಟ್ಟಿ:

1. ತುಷಾರ್ ದೇಶಪಾಂಡೆ ( ಚೆನ್ನೈ ಸೂಪರ್ ಕಿಂಗ್ಸ್ ) - 17 ವಿಕೆಟ್‌ಗಳು ( 9 ಪಂದ್ಯಗಳು )
2. ಅರ್ಷ್‌ದೀಪ್ ಸಿಂಗ್ ( ಪಂಜಾಬ್ ಕಿಂಗ್ಸ್ ) - 15 ವಿಕೆಟ್‌ಗಳು ( 9 ಪಂದ್ಯಗಳು )
3. ಮೊಹಮ್ಮದ್ ಸಿರಾಜ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು ) - 14 ವಿಕೆಟ್‌ಗಳು ( 8 ಪಂದ್ಯಗಳು )

Story first published: Monday, May 1, 2023, 10:18 [IST]
Other articles published on May 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+