
ನಿನ್ನೆ ( ಮೇ 13 ) ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡು ಪಂದ್ಯಗಳು ಜರುಗಿದವು. ಮಧ್ಯಾಹ್ನ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತು.
ಬಳಿಕ ರಾತ್ರಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯವನ್ನು ಸಾಧಿಸಿತು. ಈ ಗೆಲುವಿನ ಮೂಲಕ ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ಲೇಆಫ್ ರೇಸ್‌ನಿಂದ ಹೊರಹಾಕಿತು ಹಾಗೂ ತನ್ನ ಪ್ಲೇಆಫ್ ಹಾದಿಯನ್ನು ಸುಗಮ ಮಾಡಿಕೊಂಡಿತು.
ಇನ್ನು ಪಂಜಾಬ್ ಕಿಂಗ್ಸ್ ತಂಡ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕುಸಿತಕ್ಕೂ ಸಹ ಕಾರಣವಾಗಿದೆ. ಹೌದು, ಈ ಗೆಲುವಿನೊಂದಿಗೆ ಎಂಟನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆರನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಆರನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಳನೇ ಸ್ಥಾನಕ್ಕೆ ಕುಸಿತ ಕಂಡಿದೆ.
ಹಾಗಿದ್ದರೆ ಉಳಿದ ತಂಡಗಳು ಈ ಪಂದ್ಯಗಳ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿವೆ ಹಾಗೂ ಎಷ್ಟು ಅಂಕಗಳನ್ನು ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.