Wanindu Hasaranga Joins RCB: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಠಿಣ ಸಂದೇಶ ನೀಡಿದ RCB ಸ್ಪಿನ್ನರ್ ವನಿಂದು ಹಸರಂಗ
ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ ಐಪಿಎಲ್‌ನಲ್ಲಿ ಆರ್‌ಸಿಬಿ ಪರವಾಗಿ ಮೊದಲ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ರಾಷ್ಟ್ರೀಯ ತಂಡದ ಕರ್ತವ್ಯದ ಹಿನ್ನೆಲೆಯಲ್ಲಿ ವನಿಂದು ಹಸರಂಗ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಆರ್‌ಸಿಬಿ ತಂಡವನ್ನು ಕೂಡಿಕೊಂಡಿರುವ ವನಿಂದು ಹಸರಂಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿಯ ಹಿನ್ನೆಲೆಯಲ್ಲಿ ವನಿಂದು ಹಸರಂಗ ಆರ್‌ಸಿಬಿ ತಂಡದ ಆರಂಬಿಕ ಪಂದ್ಯಗಳಿಗೆ ಅಲಭ್ಯವಾಗಿದ್ದರು. ಇದೀಗ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದು ಮುಂದಿನ ಪಂದ್ಯಕ್ಕೆ ಸಜ್ಜಾಗಿದ್ದಾರೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಪರವಾಗಿ ಉತ್ತಮ ಪ್ರದರ್ಶಿಸುವ ಆತ್ಮವಿಶ್ವಾಸವನ್ನು ಹಸರಂಗ ವ್ಯಕ್ತಪಡಿಸಿದ್ದು ಎದುರಾಳಿಗಳಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಕಳೆದ ಐಪಿಎಲ್‌ನಲ್ಲಿ ಮಿಂಚಿದ್ದ ಹಸರಂಗ
ವನಿಂದು ಹಸರಂಗ ಕಳೆದ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಆಡಿದ 16 ಪಂದ್ಯಗಳಲ್ಲಿ ಅವರು 26 ವಿಕೆಟ್‌ಗಳನ್ನು ಸಂಪಾದಿಸಿದ್ದು 7.54ರ ಸರಾಸರಿಯಲಕ್ಲಿ ಬೌಲಿಂಗ್ ನಡೆಸಿದ್ದರು ಈ ಮೂಲಕ 2022ರ ಐಪಿಎಲ್‌ನಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದರು.
ಇತ್ತೀಚೆಗಷ್ಟೇ ತಂಡ ಸೇರಿಕೊಂಡ ಹಸರಂಗ
ಶ್ರೀಲಂಕಾ ಪರವಾಗಿ ಆಡಿದ ಬಳಿಕ ಹಸರಂಗ ಇತ್ತೀಚೆಗಷ್ಟೇ ಐಪಿಎಲ್‌ನಲ್ಲಿ ಆಡುವ ಸಲುವಾಗಿ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದರು. ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲಲ್ಲಿ ಆರ್‌ಸಿಬಿ ತಂಡ ಅಭ್ಯಾಸ ನಡೆಸುತ್ತಿದ್ದು ಅಲ್ಲಿಗೆ ಹಸರಂಗ ಸೇರಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ವನಿಂದು ಹಸರಂಗ ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲು ಹರ್ಷವಾಗುತ್ತಿದೆ ಎಂದಿದ್ದಾರೆ.
ಆರ್‌ಸಿಬಿ ಸೇರಿಕೊಳ್ಳಲು ಕಾಯುತ್ತಿದ್ದೆ
ಆರ್‌ಸಿಬಿ ತಂಡವನ್ನು ಸೇರಿಕೊಂಡ ಬಳಿಕ ಮಾತನಾಡಿರುವ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ "ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲು ಉತ್ಸಾಹದಿಂದ ಕಾಯುತ್ತಿದ್ದೆ. ಆರ್‌ಸಿಬಿ ತಂಡದ ಆಟಗಾರರು ಅತ್ಯುತ್ತಮವಾಗಿ ಸಿದ್ಧತೆಯನ್ನು ನಡೆಸುತ್ತಿದ್ದು ಹರ್ಷ ಮೂಡಿಸಿದೆ. ಕಳೆದ ವರ್ಷದ ಟೂರ್ನಿಯ ಬಳಿಕ ಆರ್‌ಸಿಬಿ ತಂಡದ ಪರವಾಗಿ ಮೊದಲ ಬಾರಿಗೆ ಬೌಲಿಂಗ್ ಮಾಡಲಿದ್ದೇನೆ. ವೈಯಕ್ತಿಕವಾಗಿ ಈ ಸವಾಲನ್ನು ರದುರಿಸಲು ಸಜ್ಜಾಗಿದ್ದೇನೆ" ಎಂದಿದ್ದಾರೆ ವನಿಂದು ಹಸರಂಗ.
ಹಸರಂಗ ಕಮ್‌ಬ್ಯಾಕ್ ಬಗ್ಗೆ ಮೈಕ್ ಹಸನ್ ಹೇಳಿದ್ದಿಷ್ಟು
ಆರ್‌ಸಿಬಿ ತಂಡದ ಕ್ರಿಕೆಟ್ ಚಟುವಟಿಕೆಗಳ ನಿರ್ದೇಶಕ ಮೈಕ್ ಹಸನ್ ವನಿಂದು ಹಸರಂಗ ಕಮ್‌ಬ್ಯಾಕ್ ಬಗ್ಗೆ ಮಾತನಾಡಿದ್ದಾರೆ. "ಹಸರಂಗ ಅವರು ಮರಳಿರುವುದು ಶ್ರೇಷ್ಠ ಸಂಗತಿಯಾಗಿದೆ. ಇಲ್ಲಿನ ಪಿಚ್(ಆಲೂರು) ಸ್ವಲ್ಪ ತಿರುವು ಪಡೆಯುತ್ತಿದೆ. ಇಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್‌ನಲ್ಲಿಯೂ ಅವರಿಂದ ಉತ್ತಮ ಇನ್ನಿಂಗ್ಸ್‌ಗಳನ್ನು ನಿರೀಕ್ಷಿಸಬಹುದಾಗಿದೆ" ಎಂದಿದ್ದಾರೆ ಮೈಕ್ ಹಸನ್.
ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಆರ್‌ಸಿಬಿ
ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸರ್ವ ಪ್ರಯತ್ನ ನಡೆಸಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದ್ದು ಶನಿವಾರ ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications