For Quick Alerts
ALLOW NOTIFICATIONS  
For Daily Alerts
 

RCB: ರಾಜಸ್ಥಾನ್ ವಿರುದ್ಧ ಗೆದ್ದು 8 ಅಂಕ ಗಳಿಸಿದ್ರೂ ಅಂಕಪಟ್ಟಿಯಲ್ಲಿಲ್ಲ ಏರಿಕೆ! ಕಾರಣವೇನು?

IPL 2023: RCB stick to 5th spot at points table due to low NRR even after 4th win

ಇಂದು ( ಏಪ್ರಿಲ್ 23 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್‌ಗಳ ಗೆಲುವನ್ನು ಕಂಡಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ದಾಖಲಿಸಿದ ನಾಲ್ಕನೇ ಗೆಲುವು ಇದಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದ್ದು, ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 190 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಲು ಯತ್ನಿಸಿದ ರಾಜಸ್ಥಾನ್ ರಾಯಲ್ಸ್ ಅಂತಿಮ ಹಂತದವರೆಗೂ ಹೋರಾಟ ನಡೆಸಿ ಕೊನೆಗೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 132 ರನ್ ಕಲೆ ಹಾಕಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿದೆ. ಹೀಗಿದ್ದರೂ ಸಹ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಾರಣ ಇತರೆ ತಂಡಗಳಿಗಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ರನ್ ರೇಟ್ ಕಡಿಮೆ ಇರುವುದು.

ಹೌದು, ಈ ಪಂದ್ಯದಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ಅಂಕಗಳನ್ನು ಪಡೆದುಕೊಂಡಿದ್ದು, ಉಳಿದ ತಂಡಗಳಾದ ಪಂಜಾಬ್ ಕಿಂಗ್ಸ್, ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳೂ ಸಹ 8 ಅಂಕಗಳನ್ನು ಪಡೆದುಕೊಂಡಿವೆ. ಪಂಜಾಬ್ ಕಿಂಗ್ಸ್ ಆರ್‌ಸಿಬಿಯಷ್ಟೇ ಅಂಕ ಪಡೆದುಕೊಂಡಿದ್ದರೂ ಸಹ ನೆಟ್ ರನ್ ರೇಟ್‌ನಲ್ಲಿ ಹಿಂದಿರುವ ಕಾರಣ ಆರ್‌ಸಿಬಿಗಿಂತ ಕಡಿಮೆ ಸ್ಥಾನದಲ್ಲಿದೆ. ಅದರಂತೆ ಉಳಿದ ತಂಡಗಳು ಆರ್‌ಸಿಬಿಯಷ್ಟೆ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ನೆಟ್ ರನ್ ರೇಟ್ ಹೆಚ್ಚಿರುವ ಕಾರಣ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿವೆ.

ಹಾಗಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ 32ನೇ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

4. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. 6 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 6 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 6 ಪಂದ್ಯಗಳನ್ನಾಡಿ ಕೇವಲ 1 ಪಂದ್ಯದಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Sunday, April 23, 2023, 20:24 [IST]
Other articles published on Apr 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+