Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB Green Jersey Match : RR ವಿರುದ್ಧ ಹಸಿರು ಜರ್ಸಿ ಧರಿಸಿ ಆಡಲಿದೆ RCB: ಜರ್ಸಿಯ ವಿಶೇಷತೆ ಏನು ಗೊತ್ತಾ?

ಐಪಿಎಲ್ 16ನೇ ಆವೃತ್ತಿಯ ಪಂದ್ಯಗಳು ತೀವ್ರ ಪೈಪೋಟಿಯಿಂದ ನಡೆಯುತ್ತಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಅದ್ಭುತ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಸತತ ಎರಡು ಗೆಲುವು ಆರ್‌ಸಿಬಿ ತಂಡವನ್ನು ಕಂಗೆಡಿಸಿದೆ. ಆದರೆ ಬಲಿಷ್ಠ ಆಟಗಾರರನ್ನು ಹೊಂದಿರುವ ಆರ್‌ಸಿಬಿ ತಂಡ ಕಮ್‌ಬ್ಯಾಕ್ ಮಾಡುವ ಆತ್ಮವಿಶ್ವಾಸದಲ್ಲಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ಮಾಹಿತಿಯೊಂದನ್ನು ಹಂಚಿಕೊಂಡಿದೆ.

ಆರ್‌ಸಿಬಿ ತಂಡ ಕಳೆದ ಹಲವು ಆವೃತ್ತಿಗಳಿಂದ ಒಂದು ಪಂದ್ಯದಲ್ಲಿ ಹಸಿರು ಜರ್ಸಿಯೊಂದಿಗೆ ಕಣಕ್ಕಿಳಿಯುವ ಸಂಪ್ರದಾಯವನ್ನಿಟ್ಟುಕೊಂಡಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಈ ಬಾರಿಯೂ ಇದನ್ನು ಆರ್‌ಸಿಬಿ ಮುಂದುವರಿದಲಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಹಸಿರು ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ.

 IPL 2023: RCB Team to wear Green Jersey against RR on April 23 Know why?

ಏಪ್ರಿಲ್ 23ರಂದು ತವರಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಆರ್‌ಸಿಬಿ ಸೆಣೆಸಾಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜರ್ಸಿಯೊಂದಿಗೆ ಕಣಕ್ಕಿಳಿಯುವುದಾಗಿ ಫ್ರಾಂಚೈಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದು ಜರ್ಸಿಯ ವಿಶೇಷತೆಯನ್ನು ಕೂಡ ಈ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ನಾಯಕ ಫಾಫ್ ಡು ಪ್ಲೆಸಿಸ್, ಮಾಜಿ ನಾಯಕ ವಿರಾಟ್ ಕೊಹ್ಲಿ ಅನುಭವಿ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಹಸಿರು ಜರ್ಸಿಯೊಂದಿಗೆ ನೀಡಿರುವ ಫೋಟೊವನ್ನು ಆರ್‌ಸಿಬಿ ಹಂಚಿಕೊಂಡಿದೆ. ಈ ಸಂದರ್ಭದಲ್ಲಿ ಈ ಜರ್ಸಿ ನೂರು ಪ್ರತಿಶತ ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್‌ಸಿಬಿ ಫ್ರಾಂಚೈಸಿ ಮಾಹಿತಿ ನೀಡಿದೆ.

ಇನ್ನು ಕುತೂಹಲಕಾರಿ ಸಂಗತಿಯೆಂದರೆ ಐಪಿಎಲ್‌ನಲ್ಲಿ ಹಸಿರು ಜರ್ಸಿ ಆಡಿರುವ ಪಂದ್ಯಗಳಲ್ಲಿ ಆರ್‌ಸಿಬಿ ಕೆಟ್ಟ ದಾಖಲೆಯನ್ನು ಹೊಂದಿದೆ. ಕೇವಲ ಮೂರು ಪಂದ್ಯಗಳಲ್ಲಿ ಮಾತ್ರವೇ ಗೆದ್ದುಕೊಂಡಿದ್ದು 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 2018ರಲ್ಲಿ ಆರ್‌ಸಿಬಿ ಹಸಿರುವ ಜರ್ಸಿಯೊಂದಿಗೆ ಕಣಕ್ಕಿಳಿದಾಗ ರಾಜಸ್ಥಾನ್ ರಾಯಲ್ಸ್ ತಂಡ ಎದುರಾಳಿಯಾಗಿದ್ದು ಆರ್‌ಬಿ ತಂಡವನ್ನು 19 ರನ್‌ಗಳ ಅಂತರದಿಂದ ಮಣಿಸಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

Story first published: Thursday, April 13, 2023, 19:33 [IST]
Other articles published on Apr 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+