For Quick Alerts
ALLOW NOTIFICATIONS  
For Daily Alerts
 

IPL 2023 RCB vs CSK : ಸ್ಟೋಕ್ಸ್, ಮಗಾಲಾ ಅಲಭ್ಯ: ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡ್ತಾರ ಧೋನಿ?

ಐಪಿಎಲ್ 2023ರ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ತಂಡದ ಪ್ರಮುಖ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ ಮತ್ತು ವೇಗಿ ಸಿಸಂದಾ ಮಗಾಲಾ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ನಾಯಕ ಧೋನಿ ಕೂಡ ಮೊಣಕಾಲು ನೋವಿನಿಂದ ಬಳಲುತ್ತಿದ್ದು ಆರ್ ಸಿಬಿ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರಾ ಎನ್ನುವ ಕುತೂಹಲ ಮೂಡಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿದ್ದರು. ಟಾಸ್ ಗೆದ್ದ ಮುಂಬೈ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿದರೆ, ರೋಹಿತ್ ಶರ್ಮಾ ಡಗೌಟ್‌ನಲ್ಲಿದ್ದರು, ಮೊದಲ ಇನ್ನಿಂಗ್ಸ್ ಬಳಿಕ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ನಿಮಯದಲ್ಲಿ ರಿಲೀ ಮೆರೆಡಿತ್ ಬದಲಾಗಿ ಆಡಿದರು.

Dhoni Came As Impact Player

13 ಎಸೆತಗಳಲ್ಲಿ 20 ರನ್ ಗಳಿಸಿ ಇಶಾನ್ ಕಿಶನ್‌ ಜೊತೆ ಉತ್ತಮ ಜೊತೆಯಾಟ ಆಡಿದರು. ಮುಂಬೈ ಇಂಡಿಯನ್ಸ್ ಈ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಎಂಎಸ್‌ ಧೋನಿ ಕೂಡ ರೋಹಿತ್ ಶರ್ಮಾ ಅವರಂತೆ ಆರ್ ಸಿಬಿ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿತಾರ ಎನ್ನುವ ಪ್ರಶ್ನೆ ಮೂಡಿದೆ.

Dhoni Came As Impact Player

ಡಿವೋನ್ ಕಾನ್ವೆ ವಿಕೆಟ್ ಕೀಪಿಂಗ್?

ಒಂದು ವೇಳೆ ಇಂದಿನ ಪಂದ್ಯದಲ್ಲಿ ಸಿಎಸ್‌ಕೆ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದರೆ ಎಂಎಸ್ ಧೋನಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. ಡಿವೋನ್ ಕಾನ್ವೆ ವಿಕೆಟ್ ಕೀಪರ್ ಆಗಿರುವುದರಿಂದ ಧೋನಿ ಬದಲಾಗಿ ಅವರು ಕೀಪಿಂಗ್ ಮಾಡಬಹುದು. ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಿಕೊಳ್ಳಬಹುದು. ಹೊರಗಿನಿಂದಲೇ ತಂಡಕ್ಕೆ ಸಲಹೆಗಳನ್ನು ನೀಡುವ ಮೂಲಕ ಆರ್ ಸಿಬಿ ವಿರುದ್ಧ ರಣತಂತ್ರ ರೂಪಿಸಬಹುದು.

ಚೇಸಿಂಗ್ ಮಾಡುವ ಸಂದರ್ಭದಲ್ಲಿ ಬೇಗನೆ ವಿಕೆಟ್ ಕಳೆದುಕೊಂಡರೆ ಧೋನಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್‌ಗೆ ಬರಬಹುದು. ಚಿನ್ನಸ್ವಾಮಿಯಲ್ಲಿ ಉತ್ತಮ ರನ್‌ ಹೊಡೆದ ದಾಖಲೆ ಹೊಂದಿರುವ ಅವರು ತಂಡಕ್ಕಾಗಿ ಉತ್ತಮ ರನ್‌ಗಳನ್ನು ಗಳಿಸಬಹುದು. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ಕೀಪಿಂಗ್ ಮಾಡುವುದರಿಂದ ಇನ್ನಷ್ಟು ಒತ್ತಡ ಬೀಳುವ ಸಾಧ್ಯತೆ ಇದ್ದು, ಈ ಉಪಾಯ ಮಾಡುವ ಸಾಧ್ಯತೆ ಇದೆ.

ಆರ್‌ಸಿಬಿ ವಿರುದ್ಧ ಪಂದ್ಯದಲ್ಲಿ ಧೋನಿ ಆಡುವ ಬಗ್ಗೆ ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಆಶಾವಾದ ವ್ಯಕ್ತಪಡಿಸಿದ್ದಾರೆ. "ಧೋನಿ ಈ ಪಂದ್ಯದಲ್ಲಿ ಹೊರಗುಳಿಯುತ್ತಾರೆ ಎಂದು ನನಗೆ ಅನಿಸುವುದಿಲ್ಲ, ಆದರೆ ಪಂದ್ಯದ ದಿನದ ಸಂಜೆವರೆಗೂ ಕಾದು ನೋಡಬೇಕು, ನಂತರ ತೀರ್ಮಾನ ಮಾಡಬಹುದು" ಎಂದು ತಿಳಿಸಿರುವಾಗಿ ಪಿಟಿಐ ವರದಿ ಮಾಡಿದೆ.

Ben Stokes IPL 2023

ಬೆನ್‌ಸ್ಟೋಕ್ಸ್, ಸಿಸಂದಾ ಮಗಾಲಾ ಅಲಭ್ಯ

ಆರ್ ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಬೆನ್‌ಸ್ಟೋಕ್ಸ್ ಮತ್ತು ವೇಗದ ಬೌಲರ್ ಸಿಸಂದಾ ಮಗಾಲಾ ಅಲಭ್ಯರಾಗಿದ್ದಾರೆ. ಮಗಾಲಾ ಬದಲಾಗಿ ಡ್ವೈನ್ ಪ್ರಿಟೋರಿಯಸ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವೇ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಸಿಎಸ್‌ಕೆ ಸಂಭಾವ್ಯ ಆಡುವ ಬಳಗ

ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್. ಇಂಪ್ಯಾಕ್ಟ್ ಪ್ಲೇಯರ್: ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಶೈಕ್ ರಶೀದ್, ಅಂಬಾಟಿ ರಾಯುಡು, ನಿಶಾಂತ್ ಸಂಧು.

Story first published: Monday, April 17, 2023, 14:15 [IST]
Other articles published on Apr 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+