ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಸೋಲು ಅನುಭವಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಬೃಹತ್ ಮೊತ್ತವನ್ನು ಒಂದಯು ಹಂತದಲ್ಲಿ ಸಮರ್ಥವಾಗಿ ಬೆನ್ನಟ್ಟುತ್ತಾ ಗೆಲುವಿನ ವಿಶ್ವಾಸದಲ್ಲಿದ್ದ ಆರ್‌ಸಿಬಿ ತಂಡ ಮಧ್ಯಮ ಕ್ರಮಾಂಕ ಆಟಗಾರರ ಬೇಜವಾಬ್ಧಾರಿಯುತ ಆಟದಿಂದಾಗಿ ಹೀನಾಯ ಸೋಲು ಅನುಭವಿಸಿದೆ.
227 ರನ್‌ಗಳ ಬೃಹತ್ ಗುರಿ ಪಡೆದ ಆರ್‌ಸಿಬಿ ವಿರಾಟ್ ಕೊಹ್ಲಿ ಹಾಗೂ ಮಹಿಪಾಲ್ ಲೋಮ್ರೋರ್ ವಿಕೆಟನ್ನು ಶೀಘ್ರವಾಗಿ ಕಳೆದುಕೊಂಡರೂ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಅಮೋಘ ಪ್ರದರ್ಶನ ನೀಡಿದರು. ಶತಕದ ಜೊತೆಯಾಟ ನೀಡಿದ ಈ ಆಟಗಾರರ ಅಸಾಧ್ಯ ಗುರಿಯನ್ನು ಸಾಧ್ಯವೆನ್ನುವ ಹಂತಕ್ಕೆ ತಂದು ನಿಲ್ಲಿಸಿದ್ದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಇತರ ಆಟಗಾರರು ತಮ್ಮ ಜವಾಬ್ಧಾರಿ ನಿರ್ವಹಿಸಲು ವಿಫಲವಾಗಿದ್ದು ತವರಿನಲ್ಲೇ ಸೋಲು ಅನುಭವಿಸುವಂತಾಯಿತು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ ಬೃಹತ್ ಗುರಿ ಬೆನ್ನಟ್ಟುವ ಸಂದರ್ಭದಲ್ಲಿ ಎರಡು ವಿಕೆಟ್‌ಗಳನ್ನು ಅಲ್ಪಮೊತ್ತಕ್ಕೆ ಕಳೆದುಕೊಂಡರೂ ಣಾಯಕ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ ಅದ್ಭುತ ಪ್ರದರ್ಶನ ನೀಡಿ ಅಬ್ಬರಿಸಿದರು. ಸ್ಪೋಟಕವಾಗಿ ಆಡಿದ ಈ ಇಬ್ಬರು ಆಟಗಾರರು ಕೂಡ ಆರ್‌ಸಿಬಿ ತಂಡಕ್ಕೆ ಸಂಪೂರ್ಣ ಮೇಲುಗೈ ಒದಗಿಸುತ್ತಾ ಸಾಗಿದರು. ಕೇವಲ 12 ಓವರ್‌ಗಳ ಮುಕ್ತಾಯದ ವೇಳೆಗೆ ಆರ್‌ಸಿಬಿ 141 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಜೋಡಿ ಬೇರ್ಒಟ್ಟ ಬಳಿಕ ಎದುರಾಳಿಯ ಕೈ ಮೇಲಾಯಿತು. ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 36 ಎಸೆತಗಳಲ್ಲಿ 76 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಈ ಇನ್ನಿಂಗ್ಸ್‌ನಲ್ಲಿ 8 ಸಿಕ್ಸರ್ 3 ಬೌಂಡರಿಗಳು ಇತ್ತು.
ಮ್ಯಾಕ್ಸ್‌ವೆಲ್ ವಿಕೆಟ್ ಕಳೆದುಕೊಂಡ ಬಳಿಕ ಫಾಫ್ ಡು ಪ್ಲೆಸಿಸ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. 33 ಎಸೆತ ಎದುರಿಸಿ 62 ರನ್‌ಗಳಿಸಿದ ಫಾಫ್ ಮೊಯೀನ್ ಅಲಿಗೆ ವಿಕೆಟ್ ಒಪ್ಪಿಸಿದರು. ನಾಲ್ಕು ಭರ್ಜರಿ ಸಿಕ್ಸರ್ ಹಾಘೂ ಐದು ಬೌಂಡರಿ ಇವರ ಇನ್ನಿಂಗ್ಸ್‌ನಲ್ಲಿತ್ತು. ಉಳಿದಂತೆ ದಿನೇಶ್ ಕಾರ್ತಿಕ್ ಕೆಲ ಹೊತ್ತು ಹೋರಾಟ ನಡೆಸಿದರೂ ಅದು ತಂಡದ ಗೆಲುವಿಗೆ ಸಾಕಾಗಲಿಲ್ಲ. ಅಂತಿಮವಾಗಿ ಆರ್‌ಸಿಬಿ 8 ರನ್‌ಗಳ ಅಂತರದ ಸೋಲು ಅನುಭವಿಸಿದೆ.
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದ ಆರ್‌ಸಿಬಿ ಸಿಎಸ್‌ಕೆ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲಿಗೆ ಬೌಲಿಂಗ್ ದಾಳಿ ನಡೆಸಿದ ಆರ್‌ಸಿಬಿ ಆರಂಭದಲ್ಲಿ ಆರಂಭದಲ್ಲಿ ಮೇಲುಗೈ ಸಾಧಿಸಲು ಯಶಸ್ವಿಯಾಯಿತು. ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರನ್ನು ಅಲ್ಪ ಮೊತ್ತಕ್ಕೆ ಸಿರಾಜ್ ಔಟ್ ಮಾಡಿದರು. ಆದರೆ ಎರಡನೇ ವಿಕೆಟ್‌ಗೆ ಜೊತೆಯಾದ ಡೆವೀನ್ ಕಾನ್ವೆ ಹಾಗೂ ಅಜಿಂಕ್ಯಾ ರಹಾನೆ 74 ರನ್‌ಗಳ ಬೃಹತ್ ಜೊತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿದರು. ಅಜಿಂಕ್ಯಾ ರಹಾನೆ ಔಟಾದ ಬಳಿಕ ಕಣಕ್ಕಿಳಿದ ಶಿವಂ ದುಬೆ ಕಾನ್ವೆ ಜೊತೆಗೆ ಮತ್ತೊಂದು ದೊಡ್ಡ ಜೊತೆಯಾಟದಲ್ಲಿ ಭಾಗಿಯಾದರು.
ಮೂರನೇ ವಿಕೆಟ್‌ಗೆ ಕಾನ್ವೆ- ದುಬೆ ಜೋಡಿ 80 ರನ್‌ಗಳ ಬೃಹತ್ ಜೊತೆಯಾಟ ನೀಡಿದರು. ಸಿಕ್ಸರ್ ಬೌಂಡರಿಗಳ ಸುರಿಮಳೆಗೈದ ಈ ಜೋಡಿ ಆರ್‌ಸಿಬಿ ಬೌಲರ್‌ಗಳಿಗೆ ಸವಾಲಾದರು. 45 ಎಸೆತಗಳಲ್ಲಿ 83 ರನ್‌ಗಳಿಸಿದ ಕಾನ್ವೆ ಹರ್ಷಲ್ ಪಟೇಲ್ ಎಸೆತದಲ್ಲಿ ಬೌಲ್ಡ್ ಆಗಿ ವಕಕೆಟ್ ಕಳೆದುಕೊಳ್ಳುವ ಮೂಲಕ ಈ ಜೋಡಿ ಬೇರ್ಪಟ್ಟಿತು. ಬಳಿಕ 27 ಎಸೆತಗಳಲ್ಲಿ 52 ರನ್ ಬಾರಿಸಿದ್ದ ಶಿವಂ ದುಬೆ ಕೂಡ ಔಟಾದರು. ನಂತರ ಬಂದ ಅಂಬಾಟಿ ರಾಯುಡು, ಮೊಯೀನ್ ಅಲಿ ಕೂಡ ಬೃಹತ್ ಮೊತ್ತಕ್ಕೆ ಕೊಡುಗೆ ನೀಡಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 226 ರನ್‌ಗಳಿಸಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್
ಬೆಂಚ್: ಅನುಜ್ ರಾವತ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಾನ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್
ಬೆಂಚ್: ಅಂಬಾಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಶೇಕ್ ರಶೀದ್, ಸುಭ್ರಾಂಶು ಸೇನಾಪತಿ, ಆರ್ ಎಸ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು