For Quick Alerts
ALLOW NOTIFICATIONS  
For Daily Alerts
 

IPL 2023, RCB vs CSK: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ ‍XI

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇದೇ ಮೈದಾನದಲ್ಲಿ ಗೆಲುವು ಸಾಧಿಸಿದ ತಂಡ ಆಡಲಿಳಿಯುತ್ತಿದ್ದು ಮತ್ತೊಂದು ಗೆಲುವಿನತ್ತ ಚಿತ್ತ ನೆಟ್ಟಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಸಿಸಂದ ಮಗಲಾ ಗಾಯದಿಂದಾಗಿ ಆಡುವ ಬಳಗದಿಂದ ಹೊರಬಿದ್ದಿದ್ದು ಮಥೀಶ ಪತಿರಾಣಾಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿದೆ.

IPL 2023, RCB vs CSK: Royal Challengers Bangalore won the toss and choose to field, Playing XI

ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳು ಈ ಬಾರಿಯ ಐಪಿಎಲ್‌ನ ಈವರೆಗಿನ ಪಂದ್ಯಗಳಲ್ಲಿ ಒಂದೇ ರೀತಿಯ ಫಲಿತಾಂಶ ಪಡೆದುಕೊಂಡಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಎರಡು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಟ್‌ ರನ್‌ರೇಟ್ ಆರ್‌ಸಿಬಿಗಿಂತ ಮುಂದಿದ್ದು ಅಂಕಪಟ್ಟಿಯಲ್ಲಿ ಒಂದುಸ್ಥಾನ ಆರ್‌ಸಿಬಿಗಿಂತ ಮೇಲಿದೆ. ಸಿಎಸ್‌ಕೆ 6ನೇ ಸ್ಥಾನದಲ್ಲಿದ್ದರೆ ಆರ್‌ಸಿಬಿ 7ನೇ ಸ್ಥಾನದಲ್ಲಿದೆ.

ಪಿಚ್ ರಿಪೋರ್ಟ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಹೈಸ್ಕೋರಿಂಗ್ ಮ್ಯಾಚ್‌ಗಳು ಹೆಚ್ಚಾಗಿ ನಡೆದಿದೆ. ಕ್ರೀಡಾಂಗಣ ಕೂಡ ಸಣ್ಣದಾಗಿರುವ ಕಾರಣ 175ಕ್ಕಿಂತ ಕಡಿಮೆ ಮೊತ್ತವನ್ನು ಇಲ್ಲಿ ರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿರಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ದೊಡ್ಡ ಮೊತ್ತವನ್ನು ಗಳಿಸದ ಹೊರತಾಗಿಯೂ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು ಎಂಬುದು ಗಮನಾರ್ಹ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್

ಬೆಂಚ್: ಅನುಜ್ ರಾವತ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಾನ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್

ಬೆಂಚ್: ಅಂಬಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಶೇಕ್ ರಶೀದ್, ಸುಭ್ರಾಂಶು ಸೇನಾಪತಿ, ಆರ್ ಎಸ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು

Story first published: Monday, April 17, 2023, 19:07 [IST]
Other articles published on Apr 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+