RCB vs KKR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಜರುಗುತ್ತಿದ್ದು, 36ನೇ ಲೀಗ್ ಪಂದ್ಯ ಇಂದು ( ಏಪ್ರಿಲ್ 26 ) ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇದು ಟೂರ್ನಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಾಗಿದ್ದು, ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಹೌದು, ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಇತ್ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ರಾ ನೈಟ್ ರೈಡರ್ಸ್ ರಹಮನ್ನುಲ್ಲಾ ಗುರ್ಬಜ್, ನಿತಿಶ್ ರಾಣಾ ಹಾಗೂ ವಿಶೇಷವಾಗಿ ಶಾರ್ದೂಲ್ ಠಾಕೂರ್ ಅಬ್ಬರದ ಆಟದ ನೆರವಿನಿಂದಾಗಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 205 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲವಾಗಿತ್ತು. 17.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 123 ರನ್‌ಗಳಿಗೆ ಆಲ್ ಔಟ್ ಆಗಿತ್ತು. ಇದು ಈ ಬಾರಿಯ ಕಥೆಯಾದರೆ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ವಿಕೆಟ್‌ಗಳ ಜಯ ಸಾಧಿಸಿತ್ತು.
ಹೀಗೆ ಮೊದಲ ಮುಖಾಮುಖಿಯಲ್ಲಿ ಆಶ್ಚರ್ಯಕರವಾಗಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಗೆದ್ದು ಸೇಡು ತೀರಿಸಿಕೊಳ್ಳುವತ್ತ ಕಣ್ಣಿಟ್ಟಿದೆ. ಹೀಗೆ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಜೋರಾಗಿದ್ದು, ಫ್ಯಾಂಟಸಿ ಕ್ರಿಕೆಟ್ ಆಡುವ ಕ್ರಿಕೆಟ್ ಪ್ರೇಮಿಗಳು ಈ ಬಹು ನಿರೀಕ್ಷಿತ ಪಂದ್ಯಕ್ಕಾಗಿ ತಂಡಗಳನ್ನು ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಊಹಿಸಿ ಫ್ಯಾಂಟಸಿ ತಂಡಗಳನ್ನು ರಚಿಸುತ್ತಿದ್ದಾರೆ. ಅಂತಹ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸುವುದು ಉತ್ತಮ.
ಡ್ರೀಮ್ ಟೀಮ್ 1: ಕೀಪರ್ - ದಿನೇಶ್ ಕಾರ್ತಿಕ್
ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಜೇಸನ್ ರಾಯ್ (ಉಪನಾಯಕ)
ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್, ಆಂಡ್ರೆ ರಸೆಲ್, ವನಿಂದು ಹಸರಂಗ, ಸುನಿಲ್ ನರೈನ್
ಬೌಲರ್‌ಗಳು- ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವರುಣ್ ಚಕ್ರವರ್ತಿ
ಡ್ರೀಮ್ ಟೀಮ್ 2:ಕೀಪರ್ - ದಿನೇಶ್ ಕಾರ್ತಿಕ್
ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಜೇಸನ್ ರಾಯ್ (ನಾಯಕ)
ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್, ಆಂಡ್ರೆ ರಸೆಲ್, ವನಿಂದು ಹಸರಂಗ
ಬೌಲರ್‌ಗಳು - ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ (ಉಪನಾಯಕ), ವರುಣ್ ಚಕ್ರವರ್ತಿ, ಡೇವಿಡ್ ವಿಲ್ಲಿ
ಸಂಭ್ಯಾವ್ಯ ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವಿಜಯ್‌ಕುಮಾರ್ ವೈಶಾಕ್
ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ಎನ್ ಜಗದೀಸನ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಕುಲವಂತ್ ಖೆಜ್ರೋಲಿಯಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications