For Quick Alerts
ALLOW NOTIFICATIONS  
For Daily Alerts
 

RCB vs KKR: ಆಡಲು ಫಿಟ್ ಆಗಿದ್ರೂ ಕೆಕೆಆರ್ ವಿರುದ್ಧ ಕಣಕ್ಕಿಳಿಯಲ್ಲ ಹೇಜಲ್‌ವುಡ್: ಕಾರಣ ಇಲ್ಲಿದೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತವರಿನ ಅಂಗಳದಲ್ಲಿ ಎದುರಿಸಲಿದೆ. ಹೀಗಾಗಿ ಈ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳು ಇದೆ. ಆದರೆ ಟೂರ್ನಿ ಮೊದಲಾರ್ಧದಲ್ಲಿ ಆರ್‌ಸಿಬಿ ತಂಡ ಗಮನಾರ್ಹ ಪ್ರದರ್ಶನ ನೀಡಿದ್ದು ಉತ್ತಮ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಪ್ರಮುಖ ವೇಗಿ ಜೋಶ್ ಹೇಜ್‌ವುಡ್ ಸಂಪೂರ್ಣವಾಗಿ ಚೇತರಿಕೆ ಕಂಡಿರುವ ಕಾರಣ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಅದಕ್ಕೆ ಈಗ ವಿಘ್ನ ಎದುರಾಗಿದೆ.

ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವಡ್ ಗಾಯದ ಕಾರಣದಿಂದಾಗಿ ಟೂರ್ನಿಯ ಮೊದಲಾರ್ಧದ ಪಂದ್ಯಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದರು. ಈಗ ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಭ್ಯಾಸವನ್ನು ನಡೆಸುತ್ತಿದ್ದು ಕೆಕೆಆರ್ ವಿರುದ್ಧ ಆಡುವುದು ಖಚಿತ ಎನ್ನಲಾಗಿತ್ತು. ಆದರೆ ಹೇಜಲ್‌ವುಡ್ ಈ ಪಂದ್ಯದಲ್ಲಿ ಆಡಲು ಕ್ರಿಕೆಟ್ ಆಸ್ಟ್ರೇಲಿಯಾ ಇನ್ನು ಕೂಡ ಅನುಮತಿ ನೀಡಿಲ್ಲ ಎಲ್ಲಲಾಗಿದೆ. ಹೀಗಾಗಿ ಮತ್ತೊಮ್ಮೆ ಡೇವಿಡ್ ವಿಲ್ಲಿ ಅವರು ಆರ್‌ಸಿಬಿ ಪರವಾಗಿ ಬೌಲಿಂಗ್ ದಾಳಿಗಿಳಿಯುವ ಸಾಧ್ಯತೆ ದಟ್ಟವಾಗಿದೆ.

IPL 2023, RCB vs KKR: Josh Hazlewood fit but unavailable for match between KKR at Chinnaswamy stadium

ಇಎಸ್‌ಪಿಎನ್ ಕ್ರಿಕ್ ಇನ್ಫೋ ಈ ಬಗ್ಗೆ ವರದಿ ಮಾಡಿದ್ದು ಜೋಶ್ ಹೇಜಲ್‌ವುಡ್ ಮತ್ತೊಂದು ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬುದನ್ನು ತಿಳಿಸಿದೆ. ಜೋಶ್ ಹೇಜಲ್‌ವುಡ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ಕ್ರಿಕೆಟ್‌ನಿಮದ ದೂರವಿದ್ದು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರು. ಏಪ್ರಿಲ್ ಮಧ್ಯದಲ್ಲಿ ಆರ್‌ಸಿಬಿ ಸ್ಕ್ವಾಡ್ ಸೇರಿಕೊಂಡ ಅವರು ಈಗ ಸಂಪೂರ್ಣ ಚೇತರಿಕೆ ಕಂಡಿದ್ದಾರೆ. ಆದರೆ ಸಿಎ ಅನುಭವಿ ವೇಗಿಯ ವುಚಾರದಲ್ಲಿ ಆತುರ ಪಡದಿರಲು ಮುಂದಾಗಿದೆ.

ಆರ್‌ಸಿಬಿಗೆ ಹೇಜಲ್‌ವುಡ್ ನೀಡಲಿದ್ದಾರೆ ದೊಡ್ಡ ಬಲ
ಇನ್ನು ಜೋಶ್ ಹೇಜಲ್‌ವುಡ್ ಆಡುವ ಬಳಗಕ್ಕೆ ಸೇರ್ಪಡೆಯಾದರೆ ತಂಡದ ಬೌಲಿಂಗ್ ವಿಭಾಗಕ್ಕೆ ದೊಡ್ಡ ಬಲ ಬಂದಂತಾಗುತ್ತದೆ. ಆರ್‌ಸಿಬಿ ಡೆತ್ ಬೌಲಿಂಗ್‌ನಲ್ಲಿಸಮಸ್ಯೆ ಎದುರಿಸುತ್ತಿದ್ದು ಹೇಜಲ್‌ವುಡ್ ಅದಕ್ಕೆ ಪರಿಹಾರವೊದಗಿಸಲಿದ್ದಾರೆ. ಇದಕ್ಕೆ ಕಳೆದ ಬಾರಿಯ ಐಪಿಎಲ್‌ನಲ್ಲಿ ಹೇಜಲ್‌ವುಡ್ ಅವರ ಬೌಲಿಂಗ್ ಪ್ರದರ್ಶನ ಸಾಕ್ಷಿ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಪರವಾಗಿ 12 ಪಂದ್ಯಗಳಲ್ಲಿ ಆಡಿದ್ದ ಅವರು 8ರ ಎಕಾನಮಿಯಲ್ಲಿ 20 ವಿಕೆಟ್‌ಗಳನ್ನು ಪಡೆದುಕೊಂಡಿದ್ದರು.

ಆರ್‌ಸಿಬಿ ಸ್ಕ್ವಾಡ್ ಹೀಗಿದೆ: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಫಿನ್ ಅಲೆನ್, ಅವಿನಾಶ್ ಸಿಂಗ್, ರಾಜನ್ ಕುಮಾರ್, ಮೈಕೆಲ್ ಬ್ರೇಸ್‌ವೆಲ್, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೊರ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಆರ್ ಸೋನು ಯಾದವ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಹಿಮಾಂಶು ಶರ್ಮಾ, ವೇಯ್ನ್ ಪಾರ್ನೆಲ್, ವಿಜಯ್ ಕುಮಾರ್ ವೈಶಾಕ್

ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ

Story first published: Wednesday, April 26, 2023, 11:49 [IST]
Other articles published on Apr 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+