Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs MI Head to Head : ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಸೆಣೆಸಾಟದಲ್ಲಿ ಬಲಿಷ್ಠ ಯಾರು? ಯಾರ ಪರವಾಗಿದೆ ಅಂಕಿಅಂಶ!

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2 ಭಾನುವಾರದಂದು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸೆಣೆಸಾಟ ನಡೆಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಕಳೆದ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶಿಸಿತ್ತು. ಈ ಬಾರಿ ಕೂಡ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿರುವ ಫಾಫ್ ಪಡೆ ಆರಂಭಿಕ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ.

ಇನ್ನು ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡ ಕಳೆದ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಲೀಗ್ ಹಂತದಲ್ಲಿ ಕೊನೆಯ ಸ್ಥಾನವನ್ನು ಪಡೆದು ಮುಖಭಂಗವನ್ನು ಅನುಭವಿಸಿತ್ತು ರೋಹಿತ್ ಪಡೆ. ಆದರೆ ಅನೇಕ ಬಲಿಷ್ಠ ಆಟಗಾರರನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕಳೆದ ಆವೃತ್ತಿಯ ಪ್ರದರ್ಶನವನ್ನು ಮರೆಸುವಂತಾ ಪ್ರದರ್ಶನ ನೀಡಲು ಸಿದ್ಧವಾಗಿದೆ. ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚು ಬಾರಿ ಚಾಂಪಿಯನ್ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವ ಪ್ರಯತ್ನ ನಡೆಸಲಿದೆ.

IPL 2023, RCB vs MI: Head to Head records, stats and other information

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳ ನಡುವಿನ ಕದನ ಐಪಿಎಲ್ ಇತಿಹಾಸದಲ್ಲಿ ಯಾವಾಗಲೂ ಅತ್ಯಂತ ರೋಮಾಂಚನಕಾರಿಯಾಗಿರುವುದರಲ್ಲಿ ಅನುಮಾನವಿಲ್ಲ. ಐಪಿಎಲ್‌ನ ಆರಂಭಿಕ ಆವೃತ್ತಿಯಿಂದಲೂ ಈ ಎರಡು ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿಕೊಂಡು ಬಂದಿದೆ. ಹಾಗಾದರೆ ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳ ಮುಖಾಮುಖಿಯನ್ನು ಗಮನಿಸಿದರೆ ಯಾವ ತಂಡ ಮೇಲುಗೈ ಕಂಡಿದೆ. ಆ ಬಗೆಗಿನ ಮಾಹಿತಿ ಇಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ಹೆಡ್ ಟು ಹೆಡ್ ಅಂಕಿಅಂಶಗಳು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಐಪಿಎಲ್‌ನ ಆರಂಭಿಕ ಆವೃತ್ತಿಯಿಂದ ಈವರೆಗೆ ಒಟ್ಟು 30 ಬಾರಿ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳು ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ. 17 ಬಾರಿ ಮುಂಬೈ ಇಂಡಿಯನ್ಸ್ ತಂಡ ಗೆದ್ದಿದ್ದರೆ 13 ಬಾರಿ ಆರ್‌ಸಿಬಿ ಗೆಲುವು ಸಾಧಿಸಿದೆ.

ಕಳೆದ ಐದು ಮುಖಾಮುಖಿಯಲ್ಲಿ ಆರ್‌ಸಿಬಿಯದ್ದೇ ಮೇಲುಗೈ: ಇನ್ನು ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಕಳೆದ ಐದು ಪಂದ್ಯಗಳ ಮುಖಾಮುಖಿಯನ್ನು ನೋಡಿದರೆ ಆರ್‌ಸಿಬಿ ತಂಡ ಅದ್ಭುತ ರೀತಿಯಲ್ಲಿ ಮೇಲುಗೈ ಸಾಧಿಸಿದೆ. ಕಳೆದ ಐದು ಪಂದ್ಯಗಳಲ್ಲಿ ಆರ್‌ಸಿಬಿ ತಂಡ ನಾಲ್ಕು ಬಾರಿ ಗೆಲುವು ಸಾಧಿಸಿದ್ದರೆ ಮುಂಬೈ ಇಂಡಿಯನ್ಸ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ.

ಅತಿ ಹೆಚ್ಚು ರನ್‌ಗಳಿಸಿದ ಆಟಗಾರರು: ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಯಾರು? ಈ ಪ್ರಶ್ನೆಗೆ ಮೊದಲ ಉತ್ತರ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ. ಈ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಕೊಹ್ಲಿ ಬ್ಯಾಟ್‌ನಿಂದ 695 ರನ್ ಸಿಡಿದಿದೆ. ಇನ್ನು ಎರಡನೇ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ ಇದ್ದು ಎಬಿಡಿ 634 ರನ್‌ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಿರಾನ್ ಪೊಲಾರ್ಡ್(539) ನಾಲ್ಕನೇ ಸ್ಥಾನದಲ್ಲಿ ರೋಹಿತ್ ಶರ್ಮಾ (478) ಹಾಘೂ ಐದನೇ ಸ್ಥಾನದಲ್ಲಿ ಅಂಬಾಟಿ ರಾಯುಡು (431) ಇದ್ದಾರೆ.

ಅತಿ ಹೆಚ್ಚು ವಿಕೆಟ್ ಯಾರಿಗೆ?: ಇನ್ನು ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಅತ್ಯಂತ ಹೆಚ್ಚು ವಿಕೆಟ್ ಪಡೆದುಕೊಂಡ ಬೌಲರ್‌ಗಳ ಪಟ್ಟಿಯಲ್ಲಿ ಯುಜುವೇಂದ್ರ ಚಾಹಲ್ ಹಾಗೂ ಜಸ್ಪ್ರೀತ್ ಬೂಮ್ರಾ ಮೊದಲ ಸ್ಥಾನದಲ್ಲಿದ್ದಾರೆ. ಇಬ್ಬರು ಕೂಡ ತಲಾ 24 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು 22 ವಿಕೆಟ್ ಕಬಳಿಸಿದ್ದಾರೆ. ಬಳಿಕ ಹರ್ಷಲ್ ಪಟೇಲ್(17 ವಿಕೆಟ್) ಹಾಗೂ ಲಸಿತ್ ಮಲಿಂಗ(16 ವಿಕೆಟ್) ಇದ್ದಾರೆ

Story first published: Friday, March 31, 2023, 16:24 [IST]
Other articles published on Mar 31, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+