ಐಪಿಎಲ್ 16ನೇ ಆವೃತ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅವಿಸ್ಮರಣೀಯವಾಗಿ ಆರಂಭಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಆವೃತ್ತಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದ್ದು 8 ವಿಕೆಟ್‌ಗಳ ಅಂತರದ ಅಮೋಘ ಗೆಲುವು ಸಾಧಿಸಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಮಿಂಚಿದ ಆರ್‌ಸಿಬಿ ತಂಡ ಬಳಿಕ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಅಮೋಘ ಪ್ರದರ್ಶನ ನೀಡಿದ್ದು ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.
ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನೀಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿ ಭರ್ಜರಿ ಪ್ರದರ್ಶನ ನೀಡಿದರು. ಮೊದಲ ವಿಕೆಟ್‌ಗೆ ಈ ಅನುಭವಿ ಜೋಡಿ ಭರ್ಜರಿ 148 ರನ್‌ಗಳ ಜೊತೆಯಾಟ ನೀಡುವ ಮೂಲಕ ಪಂದ್ಯವನ್ನು ಸಂಪೂರ್ಣವಾಗಿ ಮುಂಬೈ ಕಡೆಯಿಮದ ಕಸಿದುಕೊಂಡಿದ್ದರು, ಈ ಹಂತದಲ್ಲಿ ಫಾಫ್ 73 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.

ಬಳಿಕ ಬಂದ ದಿನೇಶ್ ಕಾರ್ತಿಕ್ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಹೀಗಾಗಿ ನಂತರ ವಿರಾಟ್ ಕೊಹ್ಲಿಯನ್ನು ಸೇರಿಕೊಂಡ ಗ್ಲೆನ್ ಮ್ಯಾಕ್ಸ್‌ವೆಲ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವಿನ ಪ್ರಕ್ರಿಯೆ ಪೂರ್ತಿಸಿಗೊಳಿಸಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 82 ರನ್‌ಗಳಿಸಿ ಅಜೇಯವಾಗಿಳಿದರು. ಇದರಲ್ಲಿ 6 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್ ಒಳಗೊಂಡಿತ್ತು. ಇನ್ನು ಅಂತಿಮ ಹಂತದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೂರು ಎಸೆತಗಳಲ್ಲಿ ಎರಡು ಸಿಕ್ಸರ್ ಸಿಡಿಸಿ ಮಿಂಚಿದರು. ಇನ್ನೂ 22 ಎಸೆತಗಳು ಬಾಕಿಯಿರುವಂತೆಯೇ ಆರ್‌ಸಿಬಿ ಈ ಪಂದ್ಯವನ್ನು ಗೆದ್ದು ಬೀಗಿದೆ.
ಇನ್ನು ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ನಡೆಸುದ ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಹೀನಾಯ ಪ್ರದರ್ಶನ ನೀಡಿತು. ಮುಂಬೈನ ಅಗ್ರ ಕ್ರಮಾಂಕದ ಆಟಗಾರರು ಕಳಪೆ ಪ್ರದರ್ಶನ ನೀಡಿ ಆರ್‌ಸಿಬಿ ಬೌಲರ್‌ಗಳಿಗೆ ತಲೆಬಾಗಿದರು. ಆದರೆ ಮುಂಬೈ ಪರವಾಗಿ ತಿಲಕ್ ವರ್ಮಾ ಏಕಾಂಗು ಪ್ರದರ್ಶನ ನೀಡಿ ಅಬ್ಬರಿಸಿದರು. 46 ಎಸೆತಗಳನ್ನು ಎದುರಿಸಿದ ತಿಲಕ್ ವರ್ಮಾ 84 ರನ್‌ಗಳಿಸಿದ್ದು ಮುಂಬೈ ಇಂಡಿಯನ್ಸ್ ಆರ್‌ಸಿಬಿಗೆ ಸವಾಲಿನ ಗುರಿ ನೀಡಲು ಕಾರಣವಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್
ಬೆಂಚ್: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಡೇವಿಡ್ ವಿಲ್ಲಿ, ಸಿದ್ದಾರ್ಥ್ ಕೌಲ್,
ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಫಿನ್ ಅಲೆನ್, ಹಿಮಾಂಶು ಶರ್ಮಾ
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್
ಬೆಂಚ್: ಡೆವಾಲ್ಡ್ ಬ್ರೆವಿಸ್, ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ಶಮ್ಸ್ ಮುಲಾನಿ, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಆಕಾಶ್ ಮಾಧ್ವಲ್, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ರಾಘವ್ ಗೋಯಲ್