For Quick Alerts
ALLOW NOTIFICATIONS  
For Daily Alerts
 

IPL 2023 RCB vs MI: ಮುಂಬೈ ಇಂಡಿಯನ್ಸ್‌ಗೆ ಆಘಾತ; ಆರ್‌ಸಿಬಿ ವಿರುದ್ಧ ರೋಹಿತ್ ಶರ್ಮಾ ಆಡುವುದು ಅನುಮಾನ!

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆ ಅಂತ್ಯಗೊಂಡಿದ್ದು, ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಶುಕ್ರವಾರ, ಮಾರ್ಚ್ 31ರಂದು ನಡೆದ ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಡಿದವು.

ಭಾನುವಾರ, ಏಪ್ರಿಲ್ 2ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ. 2023ರ ಐಪಿಎಲ್‌ನ ತಮ್ಮ ಅಭಿಯಾನವನ್ನು ಗೆಲುವಿನ ಮೂಲಕ ಆರಂಭಿಸಲು ಉಭಯ ತಂಡಗಳು ಎದುರು ನೋಡುತ್ತಿವೆ. ಆರ್‌ಸಿಬಿ ತಂಡ ತನ್ನ ತವರಿನ ಅಂಗಳದಲ್ಲಿ ಅಡುತ್ತಿರುವುದರಿಂದ ಗೆಲ್ಲುವ ನೆಚ್ಚಿನ ತಂಡವಾಗಿದೆ.

IPL 2023 RCB vs MI: Mumbai Indians Captain Rohit Sharma Doubtful To Play Against RCB Due To Illness

ಈ ನಡುವೆ, ಪಂದ್ಯ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಪಂದ್ಯ ಪ್ರಾರಂಭವಾಗಲು 48 ಗಂಟೆಗಳಿರುವಾಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಹಿನ್ನಡೆಯಾಗುವ ಸುದ್ದಿ ಕೇಳಿಬಂದಿದೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅಸ್ವಸ್ಥರಾಗಿದ್ದು, ತಮ್ಮ ಮೊದಲ ಪಂದ್ಯದಲ್ಲಿ ಮೈದಾನಕ್ಕಿಳಿಯುವುದು ಅನುಮಾನವೆನಿಸಿದೆ.

ಅನಾರೋಗ್ಯದ ಕಾರಣದಿಂದಲೇ, ನಾಯಕ ರೋಹಿತ್ ಶರ್ಮಾ ಅವರು ಗುರುವಾರ ನಡೆದ ಐಪಿಎಲ್ ಪೂರ್ವ ನಾಯಕರ ಸಮಾಗಮ ಮತ್ತು ಫೋಟೋಶೂಟ್ ಅನ್ನು ತಪ್ಪಿಸಿಕೊಂಡರು ಎಂದು ಹೇಳಲಾಗಿದೆ. ಅದೇ ರೀತಿ ಆರ್‌ಸಿಬಿ ವಿರುದ್ಧದ ತಮ್ಮ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯೂ ಇದೆ.

IPL 2023 RCB vs MI: Mumbai Indians Captain Rohit Sharma Doubtful To Play Against RCB Due To Illness

"ರೋಹಿತ್ ಶರ್ಮಾ ಅಸ್ವಸ್ಥರಾಗಿದ್ದರು. ಆದ್ದರಿಂದ, ಐಪಿಎಲ್ ಪೂರ್ವ ನಾಯಕರ ಸಮಾಗಮ ಮತ್ತು ಫೋಟೋಶೂಟ್‌ಗಾಗಿ ಅಹಮದಾಬಾದ್‌ಗೆ ಪ್ರಯಾಣಿಸಲು ಸಾಧ್ಯವಾಗಲಿಲ್ಲ. ಆದರೆ, ಏಪ್ರಿಲ್ 2ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ 2023ರ ಐಪಿಎಲ್ ಪಂದ್ಯಾವಳಿಯ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಪಂದ್ಯಕ್ಕೆ ಲಭ್ಯವಿರುತ್ತಾರೆ," ಎಂದು ತಂಡದ ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ರೋಹಿತ್ ಶರ್ಮಾ ಏಪ್ರಿಲ್ 2ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆಡುವುದು ಇನ್ನೂ ಖಚಿತವಾಗಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಬರೀ ಆಟಗಾರನಲ್ಲದೇ, ನಾಯಕನೂ ಹೌದು. ಹಿಗಾಗಿ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳು ರೋಹಿತ್ ಶರ್ಮಾ ಸಾಧ್ಯವಾದಷ್ಟು ಶೀಘ್ರ ಫಿಟ್ ಆಗಲಿ ಎಂದು ಆಶಿಸುತ್ತಿದ್ದಾರೆ.

ಐಪಿಎಲ್ 2023: ಮುಂಬೈ ಇಂಡಿಯನ್ಸ್ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಪಿಯೂಷ್ ಚಾವ್ಲಾ, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೂವಿಸ್, ಜೋಫ್ರಾ ಆರ್ಚರ್, ಸಂದೀಪ್ ವಾರಿಯರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಡನ್ನೆ ಜಾನ್ಸನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಜ್ಯೆ ರಿಚರ್ಡ್ಸನ್, ಆಕಾಶ್ ಮಧ್ವಲ್.

Story first published: Friday, March 31, 2023, 22:30 [IST]
Other articles published on Mar 31, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+